ನೇತ್ರಾವತಿ ನದಿ 
ರಾಜ್ಯ

ಪಶ್ಚಿಮ ಘಟ್ಟ ಮತ್ತು ಮಲೆನಾಡಿನಲ್ಲಿ ವರುಣನ ರೌದ್ರಾವತಾರ: ಧರ್ಮಸ್ಥಳದ ಸ್ನಾನಘಟ್ಟ ಮುಳುಗಡೆ, ಹಲವೆಡೆ ಭೂಕುಸಿತ

ಪಶ್ಚಿಮ ಘಟ್ಟ ಮತ್ತು ಮಲೆ ನಾಡಿನ ಹಲವು ತಾಲೂಕುಗಳಲ್ಲಿ ಭಾನುವಾರದಿಂದ ಗುರುವಾರದವರೆಗೂ ಸುರಿದ ಭಾರೀ ಮಳೆಯಿಂದಾಗಿ ಹಲವು ಮನೆಗಳು ,ಸೇತುವೆಗಳು ಹಾನಿಗೊಳಗಾಗಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.

ಮಂಗಳೂರು/ಚಿಕ್ಕಮಗಳೂರು/ಮಡಿಕೇರಿ: ಪಶ್ಚಿಮ ಘಟ್ಟ ಮತ್ತು ಮಲೆ ನಾಡಿನ ಹಲವು ತಾಲೂಕುಗಳಲ್ಲಿ ಭಾನುವಾರದಿಂದ ಗುರುವಾರದವರೆಗೂ ಸುರಿದ ಭಾರೀ ಮಳೆಯಿಂದಾಗಿ ಹಲವು ಮನೆಗಳು ,ಸೇತುವೆಗಳು ಹಾನಿಗೊಳಗಾಗಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.

ಬೆಳ್ತಂಗಡಿ ತಾಲೂಕಿನ ಹಲವು ಪ್ರದೇಶಗಳಲ್ಲಿ ನದಿಗಳು ತುಂಬಿ ಹರಿಯುತ್ತಿದ್ದು ಚಾರ್ಮಾಡಿ ಘಾಟ್ ನಲ್ಲಿ ಭೂ ಕುಸಿತ ಉಂಟಾಗಿದೆ, ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಸ್ನಾನಘಟ್ಟ  ಕೂಡ ಮುಳುಗಿದ್ದು ಭಕ್ತಾದಿಕಗಳಿಗೆ ಸ್ನಾನಕ್ಕೆ ಅವಕಾಶ ನೀಡುತ್ತಿಲ್ಲ.

ಚಾರ್ಮಾಡಿ ಘಾಟ್ ನ ರಸ್ತೆಗಳ ಮೇಲೆ ಬೃಹತ್ ಬಂಡೆಗಳು ಉರುಳಿದ್ದು, ಕೂಡಲೇ ಅವುಗಳನ್ನು ತೆರವುಗೊಳಿಸಿದ್ದಾಗಿ ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಹೇಳಿದ್ದಾರೆ, ತಳಮಟ್ಟದಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಭೂಕುಸಿತದ ಎಚ್ಚರಿಕೆ ನೀಡಲಾಗಿದೆ, ಹೀಗಾಗಿ  ಮಿತಬಾಗಿಲು ಗ್ರಾಮದ ಸರ್ಕಾರಿ ಶಾಲೆಗೆ ಕೆಲವರನ್ನು ಸ್ಥಳಾಂತರಿಸಲಾಗಿದೆ.  

ಚಾರ್ಮಾಡಿ ಘಾಟ್ ನಲ್ಲಿ ಹಲವು ಮರಗಳು ಧರೆಗುರುಳಿವೆ, ಮೃತ್ಯುಂಜಯ ನದಿ ಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದ್ದು,ಅಂತರ-ಅರ್ನಾಪಡೆ ರಸ್ತೆ ಮತ್ತು ಸೇತುವೆ ಸಂಪೂಪರ್ಣವಾಗಿ ಮುಳುಗಡೆಯಾಗಿದೆ. ಚಾರ್ಮಾಡಿ ಗ್ರಾಮದಲ್ಲಿ ಅರ್ಥ್ ಮೂವರ್ಸ್ ನಿಂದ ಮರಗಳನ್ನು ತೆರವು ಗೊಳಿಸಲಾಗಿದೆ.

ಚಿಕ್ಕಮಗಳೂರಿನಲ್ಲಿ ಕಸಬಾ ಹೋಬಳಿಲ್ಲಿ 14 ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ, ಮುದಿಗೆರೆ ತಾಲೂಕಿನಲ್ಲಿ ಮನೆಯೊಂದು ಸಂಪೂರ್ಣವಾಗಿ ನಾಶವಾಗಿದೆ. ಆದರೆ ಯಾವುದೇ ಪ್ರಾಣಾಪಾಯವಾಗಿಲ್ಲ, ಕುದುರೆಮುಖ ಚನ್ನಹಾಡ್ಲು ಮತ್ತು ಹಿರೆ ಬೈಲ್ ನಲ್ಲಿ ಹೇಮಾವತಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ, ಮಳೆ ಮತ್ತು ಪ್ರವಾಹದಿಂದ  ಉಂಟಾದ ಹಾನಿಯನ್ನು ಅಂದಾಜು ಮಾಡಲು ಸಚಿವ ಸಿ.ಟಿ.ರವಿ ಅವರು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!