ಯಡಿಯೂರಪ್ಪ 
ರಾಜ್ಯ

ಅಯೋಧ್ಯೆಯಲ್ಲಿ ಕರ್ನಾಟಕಕ್ಕೆ 2 ಎಕರೆ ಜಾಗ ನೀಡಿ: ಉತ್ತರ ಪ್ರದೇಶ ಸಿಎಂಗೆ ಯಡಿಯೂರಪ್ಪ ಪತ್ರ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ

ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಿಎಂ ಯಡಿಯೂರಪ್ಪ, ಇದೇ ತಿಂಗಳ 5ನೇ ತಾರೀಖು ನಡೆದ ರಾಮಮಂದಿರಕ್ಕೆ ಅಡಿಗಲ್ಲು ಕಾರ್ಯಕ್ರಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಸಿಎಂ ಬಿಎಸ್​ವೈ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ಕರ್ನಾಟಕ ರಾಜ್ಯದಿಂದ ಅಯೋಧ್ಯೆಗೆ ಸಾವಿರಾರು ಜನರು ಭೇಟಿ ನೀಡುತ್ತಾರೆ. ಹಾಗಾಗಿ  ಅಯೋಧ್ಯೆಯಲ್ಲಿ ಕರ್ನಾಟಕ ಸರ್ಕಾರಕ್ಕೆ 2 ಎಕರೆ ಭೂಮಿ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ರಾಜ್ಯದಿಂದ ಅಯೋಧ್ಯೆಗೆ ಭಕ್ತರು ಭೇಟಿ ನೀಡುತ್ತಾರೆ. ಅವರಿಗಾಗಿ ಯಾತ್ರಿ ನಿವಾಸ ನಿರ್ಮಾಣ ಮಾಡಬೇಕಾಗಿದೆ. ಈ ಉದ್ದೇಶದಿಂದ ಕರ್ನಾಟಕಕ್ಕೆ ಉತ್ತರಪ್ರದೇಶ ಸರ್ಕಾರ ಎರಡು ಎಕರೆ ಜಾಗ ನೀಡಬೇಕು ಎಂದು  ಸಿಎಂ ಯಡಿಯೂರಪ್ಪ  ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT