ರಾಜ್ಯ

ಮಂಡ್ಯ: ಗೃಹ ಪ್ರವೇಶಕ್ಕೆ ಒಂದು ವಾರ ಇರುವಾಗಲೇ ದಂಪತಿ ಆತ್ಮಹತ್ಯೆ!

ಕುಟುಂಬ ಕಲಹದಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಹಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಂಡ್ಯ.; ಕುಟುಂಬ ಕಲಹದಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಹಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಲೋಕೇಶ್(೪೩) ಮತ್ತು ಸವಿತಾ(೩೬) ಎಂಬುವರ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ಇನ್ನು ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಂದು ಗಂಡು ಮಗು ಇತ್ತು.

ಹೊಸದಾಗಿ ಮನೆ ನಿರ್ಮಾಣ ಮಾಡಿ ಮುಂದಿನ ವಾರ ಗೃಹ ಪ್ರವೇಶವನ್ನು ಈ ದಂಪತಿ ಇಟ್ಟುಕೊಂಡಿದ್ದರು. ಈ ನಡುವೆಯೇ ಇಬ್ಬರು ಸಾವನಪ್ಪಿದ್ದಾರೆ. ಶನಿವಾರ ಮುಂಜಾನೆ ಪತ್ನಿ ಸವಿತಾ, ಗ್ರಾಮದ ಪಕ್ಕದಲ್ಲೇ ಇರುವ ಕಟ್ಟೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ವಿಚಾರ ತಿಳಿದ ಗ್ರಾಮಸ್ಥರು ಗಂಡ ಲೋಕೇಶ್ ಗೆ ಫೋನ್ ಮೂಲಕ ವಿಚಾರ ತಿಳಿಸಿದ್ದಾರೆ .ಕೂಡಲೇ ಗಾಬರಿ ಗೊಂಡ ಲೋಕೇಶ್ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಕೌಟುಂಬಿಕ ಕಲಹವೆ ಆತ್ಮಹತ್ಯೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸದ್ಯ ಕೆ ಆರ್ ಪೇಟೆ ಪಟ್ಟಣ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸಂತೆಬಾಚಹಳ್ಳಿ ಹೊರ ಠಾಣೆ ಪೊಲಿಸ್ ಅಧಿಕಾರಿಗಳು ಭೇಟಿ ನೀಡಿ ಮೃತ ದೇಹಗಳನ್ನು ಶವಪರೀಕ್ಷೆ ಹಿನ್ನೆಲೆ ಆಸ್ಪತ್ರೆಗೆ ರವಾನಿಸಿದ್ದಾರೆ.

-ನಾಗಯ್ಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡೆ ಅಬ್ಬರ; ಜಿಂಬಾಬ್ವೆಗೆ 257 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

SCROLL FOR NEXT