ಹಳೆ ವೈಷಮ್ಯ ಹಿನ್ನೆಲೆ: ಕೊಲೆ ಆರೋಪಿಯ ಬರ್ಬರ ಹತ್ಯೆ
ಜೈಲಿನಿಂದ ಜಾಮೀನಿನ ಮೇಲೆ ಹೊರಬಂದು ಆಟೋ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದ ಹಳೆ ಕೊಲೆ ಆರೋಪಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಿನ್ನೆ ತಡರಾತ್ರಿ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು: ಜೈಲಿನಿಂದ ಜಾಮೀನಿನ ಮೇಲೆ ಹೊರಬಂದು ಆಟೋ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದ ಹಳೆ ಕೊಲೆ ಆರೋಪಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಿನ್ನೆ ತಡರಾತ್ರಿ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬ್ಯಾಟರಾಯನಪುರದ ಶಾಮಣ್ಣ ಗಾರ್ಡನ್ನ ಹಿರಾ ಮಸೀದಿ ಬಳಿ ನಿವಾಸಿ ಇಸ್ಲಾಂ ಖಾನ್ (36) ಕೊಲೆಗೀಡಾದ ವ್ಯಕ್ತಿ. ನಿನ್ನೆ ರಾತ್ರಿ ಇಸ್ಲಾಂ ಖಾನ್ ಹಿರಾ ಮಸೀದಿ ಬಳಿ ನಿಂತಿದ್ದಾಗ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಆತನ ಮೇಲೆ ದಾಳಿ ನಡೆಸಿದೆ.
ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಸ್ಥಳೀಯರು ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.