ರಾಜ್ಯ

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ: ಬಂಟ್ವಾಳದಲ್ಲಿ ರೆಡ್ ಆಲರ್ಟ್ ಘೋಷಣೆ

Nagaraja AB

ಮಂಗಳೂರು: ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ
ನೇತ್ರಾವತಿ ಮತ್ತು ಕುಮಾರ ಧಾರ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಬಂಟ್ವಾಳದಲ್ಲೂ ನೇತ್ರಾವತಿ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಭಾರೀ ಮಳೆ ಹಿನ್ನೆಲೆಯಲ್ಲಿ ಭಾರತೀಯ
ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಈ ಭಾಗದಲ್ಲಿ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಇದೀಗ ನದಿ 9 ಮೀಟರ್ ಗೂ ಹೆಚ್ಚಿನ ಎತ್ತರದಲ್ಲಿ ಹರಿಯುತ್ತಿದೆ. ಇದರಿಂದಾಗಿ ನೆರೆಯ ಭೀತಿ ಉಂಟಾಗಿದೆ.

SCROLL FOR NEXT