ರಾಜ್ಯ

ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಸಿಎಂ ಯಡಿಯೂರಪ್ಪ ಒಂದು ವಾರದಲ್ಲಿ ಬಿಡುಗಡೆ ಸಾಧ್ಯತೆ

Manjula VN

ಬೆಂಗಳೂರು: ಕೊರೋನಾ ವೈರಸ್ ಸೋಂಕಿನಿಂದ ಬಹುತೇಕ ಗುಣಮುಖರಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇನ್ನೊಂದು ವಾರದಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಕೊರೋನಾ ಸೋಂಕಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೆಲ ದಿನಗಳ ಹಿಂದಷ್ಟೇ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. 

ಇದೀಗ ಅವರ ಆರೋಗ್ಯದಲ್ಲಿ ಬಹುತೇಕ ಚೇತರಿಕೆಯ ಲಕ್ಷಣಗಳು ಕಂಡು ಬಂದಿದ್ದು, ಇನ್ನೊಂದು ವಾರದಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. 

ಆ.2ರಂದು ಆಸ್ಪತ್ರೆಗೆ ದಾಖಲಾಗಿರುವ ಯಡಿಯೂರಪ್ಪ ಅವರಿಗೆ ಭಾನುವಾರ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಮಂಗಳವಾರ ಮತ್ತೊಮ್ಮೆ ಪರೀಕ್ಷೆ ನಡೆಸಲಾಗುತ್ತದೆ. ನೆಗೆಟಿವ್ ಬಂದಿದ್ದೇ ಆಧರೆ, ಬಳಿಕ ಮತ್ತೊಂದು ಸುತ್ತಿನ ಆರೋಗ್ಯ ಪರೀಕ್ಷೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಪ್ರಸ್ತುತ ಯಡಿಯೂರಪ್ಪ ಅವರು ಲಕ್ಷಣ ರಹಿತ ಸೋಂಕು ಪೀಡಿತರಾಗಿದ್ದು, ಕರ್ನಾಟಕದಲ್ಲಿ ಪ್ರಸ್ತುತ ಚಾಲನೆಯಲ್ಲಿರುವ ಮಾರ್ಗಸೂಚಿಗಳ ಪ್ರಕಾರ ಆಮ್ಲಜನರ ಶುದ್ಧತ್ವದ ಪ್ರಮಾಣ ಶೇ.95ಕ್ಕಿಂತಲೂ ಹೆಚ್ಚಿದ್ದರೆ, ಶ್ವಾಸಕೋಶದ ಪ್ರಮಾಣ ನಿಮಿಷಕ್ಕೆ ಶೇ.24ರಷ್ಟಿದ್ದರೆ, ಪರೀಕ್ಷೆ ಮಾಡದೆಯೇ ಬಿಡುಗಡೆ ಮಾಡಬಹುದು ಎಂದು ತಿಳಿಸಿದೆ. 

ಸ್ವ್ಯಾಬ್ ಸಂಗ್ರಹದ 10 ದಿನಗಳ ಬಳಿಕ ವೈದ್ಯಕೀಯ ಪರೀಕ್ಷೆ ನೆಗೆಟಿವ್ ಗಾಗಿ ಕಾಯದೆ ಲಕ್ಷಣ ರಹಿತ ರೋಗಿಗಳನ್ನು ಬಿಡುಗಡೆ ಮಾಡಬಹುದಾಗಿದೆ. ಈಗಾಗಲೇ ಯಡಿಯೂರಪ್ಪ ಅವರು ಆಸ್ಪತ್ರೆಯಲ್ಲಿ 8 ದಿನಗಳ ಕಾಲ ಕಳೆದಿದ್ದಾರೆ. ಆದರೆ, ಯಡಿಯೂರಪ್ಪ ಅವರ ವಯಸ್ಸನ್ನು ಗಮನದಲ್ಲಿಟ್ಟುಕೊಂಡು ವೈದ್ಯಕೀಯ ಪರೀಕ್ಷೆಯ ದೃಢೀಕರಣಕ್ಕಾಗಿ ಕಾಯಬೇಕಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಸೋಮವಾರ ಯಡಿಯೂರಪ್ಪ ಅವರ ಸ್ವ್ಯಾಬ್ ಸಂಗ್ರಹ ಮಾಡಲಾಗಿದ್ದು, ವೈದ್ಯಕೀಯ ಪರೀಕ್ಷೆ ನೆಗೆಟಿವ್ ಬಂದಿದ್ದೇ ಆದರೆ, ಶೀಘ್ರಗತಿಯಲ್ಲಿ ಬಿಡುಗಡೆ ಮಾಡಲಾಗುತ್ತೆದ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

SCROLL FOR NEXT