ಎಚ್ ಡಿ ಕುಮಾರಸ್ವಾಮಿ ಮತ್ತು ಕನ್ನಿಮೋಳಿ 
ರಾಜ್ಯ

ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ: ಎಚ್ ಡಿ ಕುಮಾರಸ್ವಾಮಿ

ವಿಮಾನ ನಿಲ್ದಾಣದಲ್ಲಿ ಡಿಎಂಕೆ ನಾಯಕಿ ಕನ್ನಿಮೋಳಿ ಅವರಿಗೆ ಆದ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದು, ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ ಎಂದು ಹೇಳಿದ್ದಾರೆ.

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಡಿಎಂಕೆ ನಾಯಕಿ ಕನ್ನಿಮೋಳಿ ಅವರಿಗೆ ಆದ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದು, ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಚ್ ಡಿ ಕುಮಾರಸ್ವಾಮಿ ಅವರು, 'ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದು ಎಂದು ಕೇಂದ್ರ ಸರ್ಕಾರ ಬಾಯಿ ಮಾತಿಗಷ್ಟೇ ಹೇಳುತ್ತದೆ. ಆದರೆ, ಹಿಂದಿ ಅಭಿವೃದ್ಧಿಗಾಗಿ ದೇಶ, ವಿದೇಶದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರವು ಕೋಟ್ಯಂತರ ಮೊತ್ತ ವಿನಿಯೋಗಿಸುತ್ತದೆ. ಇದು ರಹಸ್ಯ ಕಾರ್ಯಸೂಚಿಗಳಲ್ಲೊಂದು. ಪ್ರಾಮಾಣಿಕ ಭಾಷಾಭಿಮಾನದಿಂದ ಮಾತ್ರ ಇವುಗಳನ್ನು ಮೆಟ್ಟಿಸಲು ಸಾಧ್ಯ ಎಂದು ಹೇಳಿದ್ದಾರೆ.

ಅಂತೆಯೇ 'ಭಾಷೆ ಕಾರಣಕ್ಕೆ ಸಂಸದೆ ಕನ್ನಿಮೋಳಿ  ಅವರನ್ನು ‘ನೀವು ಭಾರತೀಯರೇ?’ ಎಂದು ಪ್ರಶ್ನಿಸಿದ ಘಟನೆ ನಡೆದಿದೆ. ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ. ಇದೇ ಹೊತ್ತಲ್ಲೇ, ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚಾರ್ಹ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT