ರಾಜ್ಯ

ಯೂರಿಯಾ ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್

Manjula VN

ಬೆಂಗಳೂರು: ರೈತರ ಕೃಷಿ ಚಟುವಟಿಕೆಗೆ ಅನುಕೂಲವಾಗುವಂತೆ ಸಕಾಲಕ್ಕೆ ಯೂರಿಯಾ ರಸಗೊಬ್ಬರ ಸರಬರಾಜು ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಯಾವುದೇ ಕೊರತೆಯಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಹೇಳಿದ್ದಾರೆ. 

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಜೂಲೈನಲ್ಲಿ ಮಂಗಳೂರಿಗೆ ಯೂರಿಯಾ ತುಂಬಿದ ಹಡಗು ಸಕಾಲಕ್ಕೆ ಬರಲಿಲ್ಲ. ಹಾಗಾಗಿ ಸರಬರಾಜಿನಲ್ಲಿ ವ್ಯತ್ಯಾಸವಾಗಿತ್ತು. ಆದರೆ, ಆಗಸ್ಟ್ ತಿಂಗಳಿನಲ್ಲಿ ಯೂರಿಯಾ ರಸಗೊಬ್ಬರಕ್ಕೆ ಅಂದಾಜು 1.77 ಲಕ್ಷ ಟನ್ ಬೇಡಿಕೆಯಿದ್ದು, ಈಗಾಗಲೇ 49,749 ಟನ್ ಸರಬರಾಜಾಗಿದೆ. 19.305 ಟನ್ ಸರಬರಾಜು ಹಂತದಲ್ಲಿದ್ದು, 1,22,446 ಮೆಟ್ರಿಕ್ ಟನ್ ಸರಬರಾಜಿಗೆ ಸಿದ್ಧದೆ ನಡೆದಿದೆ ಎಂದು ತಿಳಿಸಿದ್ದಾರೆ. 

ಯೂರಿಯಾಗೆ ದುಪ್ಪಟ್ಟು ಬೆಲೆ ವಿಧಿಸುವುದು, ಪೂರೈಕೆ ಮಾಡಲು ನಿರಾಕರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಪ್ರಕರಣಗಳ ಮೇಲೆ ಹೆಚ್ಚಿನ ನಿಗಾ ಇಡಲಾಗುತ್ತಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. 

SCROLL FOR NEXT