ರಾಜ್ಯ

ಡಿಜೆ ಹಳ್ಳಿ ಗಲಭೆ ಪ್ರಕರಣ: 146 ಜನರ ಬಂಧನ

Raghavendra Adiga

ಬೆಂಗಳೂರು: ಮಂಗಳವಾರ ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿದೆ. ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿ 146 ಜನರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಳೆದ ರಾತ್ರಿ ನಡೆದ ಹಿಂಸಾಚಾರಕ್ಕೆ ಕಾರಣವಾದ 'ಅವಹೇಳನಕಾರಿ' ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ  ಅವರ ಸೋದರಳಿಯನನ್ನು ಬಂಧಿಸಲಾಗಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 60 ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.

ಅವಹೇಳನಕಾರಿ ಪೋಸ್ಟ್ ಹಂಚಿಕೊಂಡದ್ದಕ್ಕಾಗಿ ಆರೋಪಿ ನವೀನ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಸಕರ ಸೋದರಳಿಯ ನವೀನ್ ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಿದ ನಂತರ ಮೂರ್ತಿ ಅವರ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು. 

SCROLL FOR NEXT