ರಾಜ್ಯ

ರಾಜ್ಯದಲ್ಲಿ ಇಂದು ದಾಖಲೆಯ 7,883 ಕೊರೋನಾ ಪ್ರಕರಣ ದೃಢ, 113 ಬಲಿ, ಬೆಂಗಳೂರಿನಲ್ಲಿ 2,802 ಸೋಂಕು!

Vishwanath S

ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೋನಾ ರೌದ್ರಾವತಾರ ಮುಂದುವರೆಸಿದ್ದ ಇಂದು ದಾಖಲೆಯ 7,883 ಪ್ರಕರಣ ಪತ್ತೆಯಾಗಿದ್ದು 113 ಮಂದಿ ಬಲಿಯಾಗಿದ್ದಾರೆ. 

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 7,883 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,96,494ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 113 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 3,510ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಇಂದು 7,034 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 1,96,494 ಕೊರೋನಾ ಪ್ರಕರಣಗಳ ಪೈಕಿ 1,12,633 ಮಂದಿ ಡಿಸ್ಚಾರ್ಜ್ ಆಗಿದ್ದು ಇನ್ನು 80,343 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರಿನಲ್ಲಿ ಇಂದು 2,082 ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಇನ್ನು 23 ಮಂದಿ ಇಂದು ಮೃತಪಟ್ಟಿದ್ದಾರೆ.

SCROLL FOR NEXT