ರಾಜ್ಯ

ಕರ್ನಾಟಕ್ಕೆ ಕೊರೋನಾಘಾತ: 2 ಲಕ್ಷ ದಾಟಿದ ಸೋಂಕು, ಇಂದು 6,706 ಪ್ರಕರಣ ಪತ್ತೆ, 8,609 ಡಿಸ್ಚಾರ್ಜ್!

Vishwanath S

ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೋನಾ ರೌದ್ರಾವತಾರ ಮುಂದುವರೆಸಿದ್ದ ಸೋಂಕಿತರ ಸಂಖ್ಯೆ 2 ಲಕ್ಷ ಗಡಿ ದಾಟಿದೆ. ಇನ್ನು ಇಂದು ರಾಜ್ಯದಲ್ಲಿ 6,706 ಪ್ರಕರಣ ಪತ್ತೆಯಾಗಿದ್ದು 103 ಮಂದಿ ಬಲಿಯಾಗಿದ್ದಾರೆ. 

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 6,706 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,03,200ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 103 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 3,613ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಇಂದು 8,609 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 2,03,200 ಕೊರೋನಾ ಪ್ರಕರಣಗಳ ಪೈಕಿ 1,21,242 ಮಂದಿ ಡಿಸ್ಚಾರ್ಜ್ ಆಗಿದ್ದು ಇನ್ನು 78,336 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರಿನಲ್ಲಿ ಇಂದು 1,893 ಮಂದಿ ಕೊರೋನಾಗೆ ತುತ್ತಾಗಿದ್ದು ಸೋಂಕಿತರ ಸಂಖ್ಯೆ 81,733ಕ್ಕೆ ಏರಿಕೆಯಾಗಿದೆ. ಇನ್ನು 22 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 1,338ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 33,150 ಸಕ್ರೀಯ ಪ್ರಕರಣಗಳಿವೆ. 

SCROLL FOR NEXT