ಗೋಪಾಲಯ್ಯ 
ರಾಜ್ಯ

ಸರ್ಕಾರಕ್ಕೆ ಕೆಟ್ಟ ಹೆಸರು ತರಲು ದುಷ್ಟ ಶಕ್ತಿಗಳ ಪೂರ್ವ ನಿಯೋಜಿತ ಕೃತ್ಯ: ಗೋಪಾಲಯ್ಯ

ಸರ್ಕಾರಕ್ಕೆ ಕೆಟ್ಟ ಹೆಸರು ಕೆಲವು ದುಷ್ಟ ಶಕ್ತಿಗಳು ತರಲು ಗಲಭೆ ಮಾಡುತ್ತಿದ್ದು, ಬೆಂಗಳೂರಿನ ಘಟನೆ ಪೂರ್ವ ನಿಯೋಜಿತ ಗಲಭೆಯಂತೆ ಕಾಣುತ್ತಿದೆ ಎಂದು ಸಚಿವ ಗೋಪಾಲಯ್ಯ ಆತಂಕ ವ್ಯಕ್ತಪಡಿಸಿದ್ದಾರೆ

ಹಾಸನ: ಸರ್ಕಾರಕ್ಕೆ ಕೆಟ್ಟ ಹೆಸರು ಕೆಲವು ದುಷ್ಟ ಶಕ್ತಿಗಳು ತರಲು ಗಲಭೆ ಮಾಡುತ್ತಿದ್ದು, ಬೆಂಗಳೂರಿನ ಘಟನೆ ಪೂರ್ವ ನಿಯೋಜಿತ ಗಲಭೆಯಂತೆ ಕಾಣುತ್ತಿದೆ ಎಂದು ಸಚಿವ ಗೋಪಾಲಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.
 
ಹಾಸನದ ಹೊಳೆನರಸೀಪುರದಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ, ಯಡಿಯೂರಪ್ಪ ನೇತೃತ್ವದ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗಡದುಕೊಂಡು ಶಾಂತಿಯುತವಾಗಿ ಆಡಳಿತ ನಡೆಸುತ್ತಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗಿಲ್ಲ. ಗೃಹಸಚಿವರ ಬಸವರಾಜ ಬೊಮ್ಮಾಯಿ ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದು ಪರಿಸ್ಥಿತಿಯನ್ನು   ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂದು ಹೇಳಿದ್ದಾರೆ.

ನಾನು ಬೆಳಗ್ಗೆಯೇ ಬೆಂಗಳೂರಿನಿಂದ ಬಂದಿದ್ದೇನೆ. ಮಾಧ್ಯಮದಲ್ಲಿ ನೋಡಿ ನನಗೆ ವಿಷಯ ತಿಳಿಯಿತು. ಘಟನೆ ಹಿಂದೆ ಎಸ್‍ಡಿಪಿಐ ಸದಸ್ಯನ ಕೈವಾಡ ಇರುವ ಬಗ್ಗೆ ಗೃಹ ಸಚಿವರು ಮಾಹಿತಿ ನೀಡುತ್ತಾರೆ. ಆದರೆ ಗಲಭೆಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಬಿಜೆಪಿ ಸರ್ಕಾರ ಬಂದ ಮೇಲೆ ಯಾವುದೇ ಸಮುದಾಯದ ಮೇಲೆ ಗಲಾಟೆ ಆಗಿಲ್ಲ. ಕೆಲವು ದುಷ್ಟ ಶಕ್ತಿಗಳು ಸರ್ಕಾಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ. ಪರಿಸ್ಥಿತಿಯನ್ನು ಸಮರ್ಥವಾಗಿ ಗೃಹ ಸಚಿವರು ನಿಭಾಯಿಸುತ್ತಾರೆ. 

ಸರ್ಕಾರ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಗಲಭೆಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್