ನಳಿನ್ ಕುಮಾರ್ ಕಟೀಲ್ 
ರಾಜ್ಯ

ಬೆಂಗಳೂರಿನಲ್ಲಿ ನಡೆದ ಗಲಭೆ ಪೂರ್ವಯೋಜಿತ ರಾಜಕೀಯ ಪಿತೂರಿ: ನಳಿನ್ ಕುಮಾರ್ ಕಟೀಲ್

ಬಿಜೆಪಿ ಆಡಳಿತೂರಾಢ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಲು ರಾಜಕೀಯ ಪಿತೂರಿ ನಡೆಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. 

ಹುಬ್ಬಳ್ಳಿ: ಬಿಜೆಪಿ ಆಡಳಿತೂರಾಢ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಲು ರಾಜಕೀಯ ಪಿತೂರಿ ನಡೆಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. 

ಬೆಂಗಳೂರು ಹಿಂಸಾಚಾರ ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ಆಡಳಿತೂರಾಢ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಲು ರಾಜಕೀಯ ನಡೆಸಲಾಗಿದೆ. ಘಟನೆಗೆ ಕಾರಣಕರ್ತರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ವೇದಿಕೆಯಲ್ಲಿಯೇ ಆದರೂ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. 

ಇಂತಹ ಪರಿಸ್ಥಿತಿಗಳು ಎದುರಾದಾಗ ಜನರಿಗೆ ಪ್ರತಿಭಟನೆ ನಡೆಸುವ ಹಕ್ಕಿದೆ. ಕಾನೂನು ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡು ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಸಮಾಜದ ಶಾಂತಿ ಕದಡುವ ಇಂತಹ ಬೆಳವಣಿಗೆಗಳನ್ನು ಸಹಿಸಲು ಸಾಧ್ಯವಿಲ್ಲ. ಘಟನೆಯ ಸಂಪೂರ್ಣ ಚಿತ್ರಣವನ್ನು ಗಮನಿಸಿದರೆ, ಇದನ್ನು ಯಾರೋ ಸಂಘಟಿಸಿರುವಂತಿದೆ. 

ಏಕಕಾಲಕ್ಕೆ ಮೂರು ಸಾವಿರ ಜನ ಸೇರಿರುವುದು, ಅಷ್ಟೊಂದು ಕಲ್ಲು, ಪೆಟ್ರೋಲ್ ಸಂಗ್ರಹಿಸಿರುವುದು, ಪೊಲೀಸರು, ಮಾಧ್ಯಮದವರ ಮೇಲೆ ಹಲ್ಲೆ ನಡೆಸಿರುವುದು, ಅಲ್ಲಲ್ಲಿ ಬೆಂಕಿ ಹಚ್ಚಿರುವುದನ್ನು ಗಮನಿಸಿದರೆ ಇದೊಂದು ಅತ್ಯಂತ ಪೂರ್ವಯೋಜಿತ ಹಾಗೂ ಇದರ ಹಿಂದೆ ಯಾರದೋ ಕೈವಾಡ ಇದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. 

ಸಿಎಎ ಪ್ರತಿಭಟನೆ ವೇಳೆಯೂ ಮಂಗಳೂರಿನಲ್ಲಿಯೂ ಇಂತಹದ್ದೇ ಘಟನೆ ನಡೆದಿತ್ತು. ಹಿಂಸಾಚಾರದಲ್ಲಿ ಪಿಎಫ್ಐ, ಎಸ್'ಡಿಪಿಐ ಕೈವಾಡವಿರುವ ಸಾಧ್ಯತೆಗಳಿವೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT