ರ್ನಾಟಕ ಹೈಕೋರ್ಟ್ 
ರಾಜ್ಯ

ಕಾಮೆಡ್-ಕೆ ಪರೀಕ್ಷೆಯಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ: ಹೈಕೋರ್ಟ್

2020 ರ ಆಗಸ್ಟ್ 19 ರಂದು ನಡೆಯಲಿರುವ ಕಾಮೆಡ್-ಕೆ ಪರೀಕ್ಷೆ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು  ಸಾಧ್ಯವಿಲ್ಲ ಎಂದು  ಹೈಕೋರ್ಟ್ ಗುರುವಾರ ಹೇಳಿದೆ,  ಆದರೆ ಕೋವಿಡ್  -19 ರ ಕಾರಣದಿಂದಾಗಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಯನ್ನು ನಡೆಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ನ್ಯಾಯಾಲಯವು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿ

ಬೆಂಗಳೂರು: 2020 ರ ಆಗಸ್ಟ್ 19 ರಂದು ನಡೆಯಲಿರುವ ಕಾಮೆಡ್-ಕೆ ಪರೀಕ್ಷೆ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು  ಸಾಧ್ಯವಿಲ್ಲ ಎಂದು  ಹೈಕೋರ್ಟ್ ಗುರುವಾರ ಹೇಳಿದೆ,  ಆದರೆ ಕೋವಿಡ್  -19 ರ ಕಾರಣದಿಂದಾಗಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಯನ್ನು ನಡೆಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ನ್ಯಾಯಾಲಯವು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದೆ

ಕಾಮೆಡ್-ಕೆ ಪರೀಕ್ಷೆ ಮುಂದೂಡಲು ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಪೀಠ ತಳ್ಳಿಹಾಕಿದೆ, ಪರೀಕ್ಷೆ ಮುಂದೂಡುವಂತೆ ಮೈಸೂರು ಮೂಲದ ವಕೀಲ ಅಬ್ದುಲ್ಲಾ ಮನ್ನನ್ ಖಾನ್ ಅವರು ರಾಜ್ಯ ಸರ್ಕಾರ, ಕರ್ನಾಟಕದ ವೈದ್ಯಕೀಯ ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ ಮತ್ತು ಯೂನಿಯನ್ ಆಫ್ ಇಂಡಿಯಾಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದರು.

ಕೋವಿಡ್ -19 ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕಾಮೆಡ್-ಕೆ ಪರೀಕ್ಷೆಯನ್ನು ನಡೆಸುವುದು ಅಸಂವಿಧಾನಿಕ ಎಂದು ಮತ್ತು  2020 ರ ಜುಲೈ 24 ರಂದು ಹೊರಡಿಸಲಾದ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಅರ್ಜಿದಾರರು ನ್ಯಾಯಾಲಯಕ್ಕೆ  ಮನವಿ ಸಲ್ಲಿಸಿದ್ದರು. 

2020 ರ ಆಗಸ್ಟ್ 19 ರಂದು ಈ ಸಾಲಿನ ಕಾಮೆಡ್-ಕೆ ಪರೀಕ್ಷೆ ನಡೆಯಲಿದ್ದು ಇದರಲ್ಲಿ ರಾಜ್ಯ, ಹೊರರಾಜ್ಯದ ಸುಮಾರು  70,000 ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!