ರಾಜ್ಯ

ಇಬ್ಬರು ಪತ್ನಿಯರ ಜಗಳ ಬಗೆಹರಿಸಲಾಗದೆ ಪತಿ ಆತ್ನಹತ್ಯೆ!

ಎರಡು ಮದುವೆಯಾಗಿ ಇಬ್ಬರು ಹೆಂಡತಿಯರನ್ನು ಹೊಂದಿದ್ದ ವ್ಯಕ್ತಿಯೊಬ್ಬ, ಪತ್ನಿಯರ ಜಗಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಿಗಣಿ ಸಮೀಪದ ಕಲ್ಲುಬಾಳು ಎಂಬಲ್ಲಿ ನಡೆದಿದೆ.

ಬೆಂಗಳೂರು: ಎರಡು ಮದುವೆಯಾಗಿ ಇಬ್ಬರು ಹೆಂಡತಿಯರನ್ನು ಹೊಂದಿದ್ದ ವ್ಯಕ್ತಿಯೊಬ್ಬ, ಪತ್ನಿಯರ ಜಗಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಿಗಣಿ ಸಮೀಪದ ಕಲ್ಲುಬಾಳು ಎಂಬಲ್ಲಿ ನಡೆದಿದೆ.

ರಾಯಚೂರು ಜಿಲ್ಲೆ ನೀರಮಾನ್ವಿ ಗ್ರಾಮದ ವಾಸಿ ರಮೇಶ್( 40) ಆತ್ಮಹತ್ಯೆಗೆ ಶರಣಾದವರು.

ಈತ ಹಲವು ವರ್ಷಗಳ ಹಿಂದೆಯೇ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದು, ಇಬ್ಬರು ಪತ್ನಿಯರು ಮತ್ತು ಮಕ್ಕಳ ಜೊತೆ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಮಾರುತಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. 

ಗಾರೆ ಕೆಲಸ ಮಾಡುತ್ತಿದ್ದ ಈತನಿಗೆ ಇಬ್ಬರು ಪತ್ನಿಯರ ಜಗಳ ಬಿಡಿಸಲಾಗದೆ ಕಗ್ಗಂಟಾಗಿತ್ತು. ಇದರಿಂದಾಗಿ ಇತ್ತೀಚೆಗೆ ಆಅ ಖಿನ್ನತೆಗೆ ಒಳಗಾಗಿದ್ದ. 

ಬುಧವಾರ ರಾತ್ರಿ ಕಲ್ಲುಬಾಳು ಸಮೀಪ ಸಂಬಂಧಿಗಳ ಮನೆಗೆ ಆಗಮಿಸಿದ್ದ ರಮೇಶ್ ಅಲ್ಲಿಂದ ಮನೆಗೆ ಹಿಂತಿರುಗುವುದಾಗಿ ಹೇಳಿ ಹೋದವನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬ ಗುರುವಾರ ಬೆಳಿಗ್ಗೆ ಈ ದೃಶ್ಯ ಕಂಡು ಪೋಲೀಸರಿಗೆ ಮಾಹಿತಿ ರವಾನಿಸಿದ್ದಾರೆ. 

ಸ್ಥಳಕ್ಕಾಗಮಿಸಿದ ಜಿಗಣಿ ಪೊಲೀಸರು ಸುತ್ತಮುತ್ತಲಿನವರಲ್ಲಿ ವಿಚಾರಿಸಿದಾಗ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದೆ, ತಕ್ಷಣ ಪೋಲೀಸರು ಮೃತನ ಇಬ್ಬರೂ ಪತ್ನಿಯರಿಗೆ ವಿಚಾರ ತಿಳಿಸಿದ್ದು ಅವರು ಸಾವನ್ನಪ್ಪಿದ ವ್ಯಕ್ತಿ ತಮ್ಮ ಪತಿ ಎಂದು ಗುರುತಿಸಿದ್ದಾರೆ. ಸಧ್ಯ ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ, 

ಘಟನೆ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT