ಸಾಂದರ್ಭಿಕ ಚಿತ್ರ 
ರಾಜ್ಯ

ಶಾಸಕ ಲಾಲಾಜಿ ಆರ್. ಮೆಂಡನ್‌ಗೆ ಕೊರೋನಾ ಸೋಂಕು

ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಲಾಲಾಜಿ ಅರ್. ಮೆಂಡನ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಲಾಲಾಜಿ ಅರ್. ಮೆಂಡನ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಬಗ್ಗೆ ಅವರು ತಮ್ಮ ಫೇಸ್‍ಬುಕ್ ಪೇಜ್‍ನಲ್ಲಿ ಬರೆದುಕೊಂಡಿದ್ದು, ತಮ್ಮ ಆಪ್ತ ಕಾರ್ಯದರ್ಶಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಕಳೆದ 7 ದಿನಗಳಿಂದ ಹೋಂ ಕಾರಂಟೈನ್ ನಲ್ಲಿದ್ದು, ಮುಂಜಾಗೃತಾ ಕ್ರಮವಾಗಿ ನಾನು ಪರೀಕ್ಷೆ ಮಾಡಿಸಿದಾಗ ಕೋವಿಡ್ 19 ಸೋಂಕು ದೃಢಪಟ್ಟಿದೆ. ಯಾವುದೇ ಸೋಂಕಿನ ಲಕ್ಷಣಗಳು ಇಲ್ಲದಿರುವುದರಿಂದ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಅಗತ್ಯ ಕಾರ್ಯಗಳಿಗೆ ಕಚೇರಿಯನ್ನು ಸಂಪರ್ಕಿಸಿ. ನಾನು ಆದಷ್ಟು ಬೇಗ ಕಾಪು ಜನತೆಯ ಸೇವೆಗೆ ಮರಳುತ್ತೇನೆ, ತಮ್ಮ ಸಹಕಾರವಿರಲಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಶಾಸಕರ ಆಪ್ತ ಕಾರ್ಯದರ್ಶಿಗೆ ಕಳೆದ ವಾರ ಸೋಂಕು ಧೃಡಪಟ್ಟಿದ್ದು, ಆ ಬಳಿಕ ಶಾಸಕರು ಸ್ವಯಂ ಕ್ವಾರಂಟೈನ್‌ಗಿದ್ದರು. ವಾರದ ಬಳಿಕ ಪರೀಕ್ಷೆಗೊಳಗಾದ ಲಾಲಾಜಿ ಆರ್ ಮೆಂಡನ್‌ ವರದಿಯಲ್ಲಿ ಸೋಂಕು ಧೃಡಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!