ಎಸ್ ಆರ್ ಶ್ರೀನಿವಾಸ್ 
ರಾಜ್ಯ

ಗುಬ್ಬಿ ಶಾಸಕ ಜೆಡಿಎಸ್ ನ ಎಸ್.ಆರ್. ಶ್ರೀನಿವಾಸ್ ಇಡೀ ಕುಟುಂಬಕ್ಕೆ ಕೊರೋನಾ!

ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿದೆ. ಆದರೆ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಬಚಾವ್ ಆಗಿದ್ದಾರೆ.

ತುಮಕೂರು: ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿದೆ. ಆದರೆ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಬಚಾವ್ ಆಗಿದ್ದಾರೆ. 

ಶಾಸಕ ಶ್ರೀನಿವಾಸ್ ಪತ್ನಿ, ಪುತ್ರ ಮತ್ತು ಪುತ್ರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ವೇಳೆ ಶ್ರೀನಿವಾಸ್ ಅವರ ಕೊರೋನಾ ರಿಪೋರ್ಟ್ ನೆಗೆಟಿವ್ ಬಂದಿದೆ. ಈ ಬಗ್ಗೆ ಸ್ವತಃ ಶಾಸಕ ಶ್ರೀನಿವಾಸ್ ಸಾಮಾಜಿಕ  ಜಾಲತಾಣಗಳ ಮೂಲಕ ಖಚಿತಪಡಿಸಿದ್ದಾರೆ.

ನಮ್ಮ ಕುಟುಂಬದ ರಾಪಿಡ್ ಟೆಸ್ಟ್ ಮತ್ತು  ಅರ್.ಟಿ.ಪಿ.ಸಿ.ಆರ್ ಕೊರೋನಾ ಪರೀಕ್ಷೆಯ ವರದಿ ಬಂದಿದ್ದು ನನಗೆ ನೆಗೆಟಿವ್ ಮತ್ತು ನನ್ನ ಪತ್ನಿ, ಮಗ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ರೋಗ ಲಕ್ಷಣಗಳಿದ್ದು ತುಮಕೂರು ಜಿಲ್ಲಾಸ್ಪತ್ರೆಯ ವೈದ್ಯರ ನಿರ್ದೇಶನದಂತೆ ಮನೆಯಲ್ಲೇ ಚಿಕಿತ್ಸೆ ‌ಪಡೆಯುತ್ತಿದ್ದಾರೆ ಎಂದು ಶ್ರೀನಿವಾಸ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್