ಸಿಎಂ ಯಡಿಯೂರಪ್ಪ (ಸಂಗ್ರಹ ಚಿತ್ರ) 
ರಾಜ್ಯ

74ನೇ ಸ್ವಾತಂತ್ರ್ಯ ದಿನಾಚರಣೆ: ಜನತೆಗೆ ಶುಭಾಶಯ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ

ದೇಶದಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆಮಾಡಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವದು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ಬೆಂಗಳೂರು: ದೇಶದಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆಮಾಡಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವದು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಮಸ್ತ ಜನತೆಗೆ 74ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ನಿರಂತರ ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ನಮ್ಮ ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯದ ಸಂಭ್ರಮಾಚರಣೆಯ ಜೊತೆಗೆ ಸಂರಕ್ಷಣೆಯ ಕರ್ತವ್ಯವನ್ನೂ ನಾವು ನಿರ್ವಹಿಸೋಣ. ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ನಮಿಸುತ್ತಾ, ದೇಶಕಟ್ಟುವ ಕಾಯಕದಲ್ಲಿ ಜೊತೆಯಾಗೋಣ ಎಂದು ಹೇಳಿದ್ದಾರೆ. 

ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಇಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. 

ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆದು ಗುಣಮುಖರಾದ ಬಳಿಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರು ಭಾಗವಿಸುತ್ತಿರುವುದು ಇದೇ ಮೊದಲ ಕಾರ್ಯಕ್ರಮವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT