ಬೆಂಗಳೂರು: ನಾಡಿನ ಸಮಸ್ತ ಜನಕೋಟಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ಶುಭಕೋರಿದ್ದಾರೆ.
ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಾಕಾರಗೊಂಡಾಗಲೇ ರಾಜಕೀಯ ಸ್ವಾತಂತ್ರ್ಯ ಪರಿಪೂರ್ಣಗೊಳ್ಳುವುದು. ಆ ದಿಕ್ಕಿನೆಡೆಗೆ ದೃಢಚಿತ್ತದಿಂದ ಹೆಜ್ಜೆ ಹಾಕುವ ಸಂಕಲ್ಪವನ್ನು 74ನೇ ಸ್ವಾತಂತ್ರ್ಯೊತ್ಸವದ ದಿನ ನಾವೆಲ್ಲರೂ ಕೈಗೊಳ್ಳೋಣ ಎಂದು ಟ್ವೀಟ್ ಮಾಡಿದ್ದಾರೆ.
ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ, ವೀರ ಸಂಗೊಳ್ಳಿ ರಾಯಣ್ಣನವರಂತಹ ದೇಶಪ್ರೇಮಿಗಳ ತ್ಯಾಗ-ಬಲಿದಾನದ ಫಲ. ಈ ಸ್ವಾತಂತ್ರ್ಯವನ್ನು ರಕ್ಷಿಸಿ ಉಳಿಸಿಕೊಳ್ಳುವ ನಿರಂತರ ಹೋರಾಟದಲ್ಲಿ ನಾವು ವಿರಮಿಸದಂತೆ ಸಂಗೊಳ್ಳಿ ರಾಯಣ್ಣನ ಸಾಹಸಗಾಥೆ ಸದಾ ಎಚ್ಚರಿಸುತಿರಲಿ. ನಿತ್ಯ ಸ್ಮರಣೀಯ ರಾಯಣ್ಣನಿಗೆ ನನ್ನ ಗೌರವದ ನಮನ ಎಂದು ಟ್ವೀಟ್
ಸಂದೇಶದ ಮೂಲಕ ತಿಳಿಸಿದ್ದಾರೆ.