ಸಂಗ್ರಹ ಚಿತ್ರ 
ರಾಜ್ಯ

ಸ್ವಾಬ್ ಪಡೆದ 2 ಗಂಟೆಗಳಲ್ಲಿ ವರದಿ ನೀಡಲು ಆರೋಗ್ಯ ಇಲಾಖೆ ಚಿಂತನೆ

ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಮೂಗು ಮತ್ತು ಗಂಟಲ ದ್ವರದ ಮಾದರಿ ಸಂಗ್ರಹಿಸಿದ ಪರೀಕ್ಷೆಗಳನ್ನು ಶೀಘ್ರಗತಿಯಲ್ಲಿ ನಡೆಸಿ 2 ಗಂಟೆಗೊಳಗಾಗಿ ವೈದ್ಯಕೀಯ ಫಲಿತಾಂಶ ನೀಡುವುದರ ಕುರಿತು ಆರೋಗ್ಯ ಇಲಾಖೆ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಮೂಗು ಮತ್ತು ಗಂಟಲ ದ್ವರದ ಮಾದರಿ ಸಂಗ್ರಹಿಸಿದ ಪರೀಕ್ಷೆಗಳನ್ನು ಶೀಘ್ರಗತಿಯಲ್ಲಿ ನಡೆಸಿ 2 ಗಂಟೆಗೊಳಗಾಗಿ ವೈದ್ಯಕೀಯ ಫಲಿತಾಂಶ ನೀಡುವುದರ ಕುರಿತು ಆರೋಗ್ಯ ಇಲಾಖೆ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ಸೋಂಕಿತರ ಶೀಘ್ರಪತ್ತೆಗೆ ಆ್ಯಂಟಿಜೆನ್ ಪರೀಕ್ಷೆ ನಡೆಸಲಾಗುತ್ತಿದೆ. ಆ್ಯಂಟಿಜನ್ ಟೆಸ್ಟ್'ನಿಂದಾಗಿ ಪ್ರಯೋಗಾಲಯಗಳಮೇಲಿನ ಹೊರೆ ಕಡಿಮೆಯಾಗಿದೆ. ಸ್ವಾಬ್ ಪಡೆದ ಒಂದು ಗಂಟೆಯೊಳಗೆ ಪರೀಕ್ಷೆಗೊಳಪಡಿಸಿದರೆ, ನಂತರದ ಮತ್ತೊಂದು ಗಂಟೆಯಲ್ಲಿ ಫಲಿತಾಂಶ ಬರಲಿದೆ. ಲಕ್ಷಣ ರಹಿತ ವ್ಯಕ್ತಿಗಳಿಗೆ ಆ್ಯಂಟಿಜನ್ ಪರೀಕ್ಷೆಯ ಫಲಿತಾಂಶ ಪಾಸಿಟಿವ್ ಬಂದಲ್ಲಿ ಮತ್ತೊಮ್ಮೆ ಆರ್'ಟಿಪಿಸಿಆರ್ ಪರೀಕ್ಷೆ ನಡೆಸಬೇಕು ಎಂದು ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ತಿಶಿಸಿದ್ದಾರೆ. 

ಕೋವಿಡ್ ಸೋಂಕಿತರೊಂದಿಗೆ ಸಂಪರ್ಕ ಹೊಂದಿರುವವರು, ಹಿರಿಯ ನಾಗರಿಕರು,ಅಸವಸ್ಥಗೊಂಡವರಿಗೆ ಆ್ಯಂಟಿಜೆನ್ ಪರೀಕ್ಷೆ ನಡೆಸಲಾಗುವುದು. ಈ ಮೂಲಕ ಸೋಂಕು ಹರಡುವಿಕೆಯನ್ನು ತಡೆಗಟ್ಟಲಾಗುತ್ತದೆ.ಪ್ರಯೋಗಾಲಯಗಳು, ಆಸ್ಪತ್ರೆಗಳು ಹಾಗೂ ವೈದ್ಯಕೀಯ ಸಂಸ್ಥೆಗಳು ಪರೀಕ್ಷೆಯ ಫಲಿತಾಂಶವನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನ ಪೋರ್ಟಲ್ ನಲ್ಲಿ ದಾಖಲಿಸಬೇಕು ಎಂದು ಎಚ್ಚರಿಸಿದ್ದಾರೆ. 

ದಿನನಿತ್ಯದ ಪರೀಕ್ಷಾ ಸಾಮರ್ಥ್ಯವನ್ನು ಇದೀಗ 50,000ದಿಂದ 55,000ಕ್ಕೆ ಏರಿಕೆಯ ಮಾಡಲಾಗಿದೆ. ರಾಜ್ಯದಲ್ಲಿ 100 ಪ್ರಯೋಗಾಲಯಗಳು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ಬ್ಯಾಕ್ಲಾಗ್ ಗಳನ್ನು ಇಟ್ಟುಕೊಳ್ಳದಂತೆ ಸೂಚಿಸಲಾಗಿದ್ದು, ಪ್ರಯೋಗಾಲಯಗಳಲ್ಲಿ ಸ್ವಯಂಚಾಲಿತ ಯಂತ್ರಗಳನ್ನು ಸ್ಥಾಪನೆ ಸ್ಥಾಪಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೈದ್ ಅಖ್ತರ್ ಅವರು ಹೇಳಿದ್ದಾರೆ. 

ಬ್ಯಾಕ್ಲಾಗ್ ಗಳಾಗಿರುವ ಸ್ಯಾಂಪಲ್ಸ್ ಗಳನ್ನು ಮುಂದಿನ 48 ಗಂಟೆಗಳೊಳಗಾಗಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಸೋಂಕಿತರು ಕಾಯುವ ಸಮಯವನ್ನು ಕಡಿಮೆ ಮಾಡಲು ಈ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಎರಡು ಗಂಟೆಗಳಲ್ಲಿ ಜನರಿಗೆ ವೈದ್ಯಕೀಯ ಫಲಿತಾಂಶ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. 

ಬೆಂಗಳೂರಿನಲ್ಲಷ್ಟೇ ಇಲ್ಲದೆ ಎಲ್ಲಾ ಜಿಲ್ಲೆಗಳಲ್ಲೂ ಎರಡು ಗಂಟೆಗಳಲ್ಲಿ ವೈದ್ಯಕೀಯ ಫಲಿತಾಂಶ ನೀಡುವ ಕಾರ್ಯಗಳನ್ನು ಮಾಡಲಾಗುತ್ತದೆ. ಪ್ರತೀ ಸ್ವಯಂಚಾಲಿತ ಯಂತ್ರಗಳ ದರ ರೂ.40-55 ಲಕ್ಷವಾಗಲಿದ್ದು, ಪ್ರಸ್ತುತ ರಾಜ್ಯದಲ್ಲಿ ದೊಡ್ಡ ಪ್ರಯೋಗಾಲಯಗಳನ್ನು ಹೊಂದಿರುವ ನಿಮ್ಹಾನ್ಸ್ ಹಾಗೂ ಬೆಂಗಳೂರು ವೈದ್ಯಕೀಯ ಕಾಲೇಜುಗಳಲ್ಲಿ ಈ ಯಂತ್ರಗಳಿದ್ದು, ಈ ಪ್ರಯೋಗಾಲಯಗಳಲ್ಲಿ ಎರಡು ಆರ್‌ಟಿ-ಪಿಸಿಆರ್ ಮತ್ತು ರಿಬೊನ್ಯೂಕ್ಲಿಯಿಕ್ ಆಸಿಡ್ (ಆರ್‌ಎನ್‌ಎ) ಹೊರತೆಗೆಯುವ ಯಂತ್ರಗಳಿವೆ. ಇದನ್ನು ಐದಕ್ಕೆ ಹೆಚ್ಚಿಸುವ ಉದ್ದೇಶವನ್ನು ಇಲಾಖೆ ಹೊಂದಿದೆ, 

ಇಲಾಖೆಯು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಮತ್ತು ಸ್ಥಳೀಯ ಕ್ಲಿನಿಕ್ ಗಳ ಜೊತೆಗೆ ಮಾತುಕತೆ ನಡೆಸುವ ಕಾರ್ಯವನ್ನು ನಡೆಸುತ್ತಿದ್ದು, ಈ ಮೂಲಕ ಕೋವಿಡ್ ರೋಗಲಕ್ಷಣಗಳನ್ನು ಹೊಂದಿರುವ ರೋಗಿಗಳನ್ನು ಪರೀಕ್ಷೆಗಳಿಗೊಳಪಡಿಸುವಂತೆ ಸೂಚಿಸಿ ಶೀಘ್ರಗತಿಯಲ್ಲಿ ಲಕ್ಷಣ ಪತ್ತೆಹಚ್ಚಲು ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದೆ. ಶೀತ, ಜ್ವರ, ಐಎಲ್ಐ ಮತ್ತು ಸಾರಿ ಮಾದರಿಯ ಕಾಯಿಲೆಗಳಿಗೆ ಔಷಧಿಗಳ ಪಡೆಯುವ ಬಗ್ಗೆ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡುವಂತೆ ಔಷಧಾಲಯಗಳಿದೆ ಸೂಚಿನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆ': SCO ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

SCO ಶೃಂಗಸಭೆ 2025: ಅಮೆರಿಕಾ 'ಬೆದರಿಕೆ ವರ್ತನೆ'ಗೆ ಚೀನಾ ಖಂಡನೆ, ಡೊನಾಲ್ಡ್ ಟ್ರಂಪ್ ವಿರುದ್ಧ ಕ್ಸಿ ಜಿನ್‌ಪಿಂಗ್ ಪರೋಕ್ಷ ವಾಗ್ದಾಳಿ

SCO ಶೃಂಗಸಭೆ 2025: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಬಳಿಕ ರಷ್ಯಾ ಅಧ್ಯಕ್ಷರ ಭೇಟಿಯಾದ ಪ್ರಧಾನಿ ಮೋದಿ, ತೀವ್ರ ಕುತೂಹಲ..!

ಸದ್ದಿಲ್ಲದೆ ಹಸೆಮಣೆ ಏರಲು ಸಜ್ಜಾದ ಚಿಕ್ಕಣ್ಣ: ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ; ಹಾಸ್ಯನಟನ ಕೈ ಹಿಡಿಯೋ ಹುಡುಗಿ ಯಾರು?

ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ

SCROLL FOR NEXT