ರಾಜ್ಯ

ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ನದಿಗಳು; ಕೆಲವೆಡೆ ಪ್ರವಾಹ ಭೀತಿ 

Shilpa D

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆ ಮುಂದುವರಿದಿದ್ದು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇನ್ನು ಮೂರು ದಿನ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಮತ್ತು ರಾಜ್ಯದಲ್ಲೂ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಈ ಬಾರಿಯೂ ಪ್ರವಾಹದ ಭೀತಿ ಎದುರಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ. 19ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಮಲೆನಾಡಿನ ಜಿಲ್ಲೆಯಾದ ಚಿಕ್ಕಮಗಳೂರಿನಲ್ಲೂ ಮಳೆಯ ಅಬ್ಬರ ಜೋರಾಗಿದೆ. ಭಾರೀ ಗಾಳಿ ಮಳೆಗೆ ಮೂಡಿಗೆರೆ ತಾಲೂಕಿನ ಹೊರಟ್ಟಿ ಹಾಗೂ ಕಲ್ಮನೆ ಗ್ರಾಮದಲ್ಲಿ ಎರಡು ಮನೆಗಳು ಸಂಪೂರ್ಣ ಜಖಂಗೊಂಡಿವೆ.

SCROLL FOR NEXT