ಶಾಸಕ ಜಮೀರ್ ಅಹ್ಮದ್ ಖಾನ್ಗೆ ಕೊರೊನಾ ಸೋಂಕು ದೃಢ
ಮಾಜಿ ಸಚಿವ, ಹಾಲಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಬೆಂಗಳೂರು: ಮಾಜಿ ಸಚಿವ, ಹಾಲಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮೂಲಕ ಸ್ವತಃ ಮಾಹಿತಿ ನೀಡಿರುವ ಅವರು , ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.