ರಾಜ್ಯ

ಬೆಂಗಳೂರು: ಭಯೋತ್ಪಾದಕರೊಂದಿಗೆ ನಂಟು ಆರೋಪ, ಎನ್‍ಐಎಯಿಂದ ವೈದ್ಯಕೀಯ ವಿದ್ಯಾರ್ಥಿ ಬಂಧನ 

Nagaraja AB

ಬೆಂಗಳೂರು: ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಇತ್ತೀಚೆಗೆ ಅಂತಿಮ ವರ್ಷದ ಸ್ನಾತಕೋತ್ತರ ಪದವಿ ಪರೀಕ್ಷೆ ಬರೆದಿದ್ದ ವೈದ್ಯಕೀಯ ವಿದ್ಯಾರ್ಥಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಅಧಿಕೃತ ಮೂಲಗಳಂತೆ ಪ್ರಕಾರ, ಬಂಧಿತ ವಿದ್ಯಾರ್ಥಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ನಗರದ ಪ್ರತಿಷ್ಠಿತ ಪ್ರದೇಶದಲ್ಲಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆಯಲಾಗಿದೆ.
 
ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ 2014ರಲ್ಲಿ ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದ ಅಬ್ದುಲ್, 2017ರಲ್ಲಿ ಸರ್ಕಾರಿ ಕೋಟಾದಡಿ ಎಂ.ಎಸ್. ವ್ಯಾಸಂಗಕ್ಕಾಗಿ ಅದೇ ಕಾಲೇಜಿಗೆ ಸೇರಿದ್ದ. ಇದೇ ಜುಲೈನಲ್ಲಿ ಅಂತಿಮ ಪರೀಕ್ಷೆಯನ್ನೂ ಬರೆದಿದ್ದ. ಕಾಲೇಜಿನ ಹೊರಗೆ ಚಟುವಟಿಕೆಗಳ ಬಗ್ಗೆ ನಮಗೆ ಗೊತ್ತಿರಲಿಲ್ಲ ಎಂದು ಕಾಲೇಜಿನ ಪತ್ರಿಕಾ ಪ್ರಕಟಣೆ ತಿಳಿಸಿದೆ. 

ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಎನ್ಐಎ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

SCROLL FOR NEXT