ಸಾಂದರ್ಭಿಕ ಚಿತ್ರ 
ರಾಜ್ಯ

ಗಂಗಾವತಿ: ಒಂದು ವಾರದಲ್ಲಿ ಒಂದೇ ಕುಟುಂಬದ ಮೂವರು ಸಹೋದರರು ಕೊರೊನಾ ಸೋಂಕಿಗೆ ಬಲಿ

ಕೊರೋನಾ ಪಾಸಿಟಿವ್ ಕಾಣಿಸಿಕೊಂಡ ಪರಿಣಾಮ ಒಂದೇ ಕುಟುಂಬಕ್ಕೆ ಸೇರಿದ ಮೂವರು ಸಹೋದರರು ಒಂದು ವಾರದ ಅಂತರದಲ್ಲಿ ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ಪಂಪಾನಗರ ಪಾಂಡುರಂಗ ದೇವಸ್ಥಾನ ಸಮೀಪ ಸಂಭವಿಸಿದೆ.

ಗಂಗಾವತಿ: ಕೊರೋನಾ ಪಾಸಿಟಿವ್ ಕಾಣಿಸಿಕೊಂಡ ಪರಿಣಾಮ ಒಂದೇ ಕುಟುಂಬಕ್ಕೆ ಸೇರಿದ ಮೂವರು ಸಹೋದರರು ಒಂದು ವಾರದ ಅಂತರದಲ್ಲಿ ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ಪಂಪಾನಗರ ಪಾಂಡುರಂಗ ದೇವಸ್ಥಾನ ಸಮೀಪ ಸಂಭವಿಸಿದೆ.

ಮಾಜಿ ಸಚಿವ ಶಿವರಾಜ ತಂಗಡಗಿ ಅವರ ಆಪ್ತ ಸಹಾಯಕರಾಗಿದ್ದ ದತ್ತಾತ್ರೇಯ ಪತ್ತಾರ (ದತ್ತಣ್ಣ) ಅವರಿಗೆ ಕೊರೊನಾ ಪಾಸಿಟೀವ್ ಕಾಣಿಸಿಕೊಂಡು ಕೊಪ್ಪಳದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೇನು ಗುಣಮುಖರಾಗಿ ಮನೆಗೆ ಮರಳಬೇಕು ಎನ್ನುವಷ್ಟರಲ್ಲಿ ಕೇವಲ ಆರು ದಿನಗಳ ಹಿಂದಷ್ಟೆ ಕೊಪ್ಪಳದಲ್ಲಿ ಸಾವನ್ನಪ್ಪಿದ್ದರು.

ಅದಾದ ಬಳಿಕ ದತ್ತಣ್ಣ ಅವರ ಇಬ್ಬರು ಸಹೋದರರಾದ ಪ್ರಕಾಶ್ ಪತ್ತಾರ ಮತ್ತು ರವಿಶಂಕರ್ ಒತ್ತಾರ ಅವರಿಗೂ ಪಾಸಿಟಿವ್ ಕಾಣಿಸಿಕೊಂಡಿತ್ತು. ಈ ಪೈಕಿ ಪ್ರಕಾಶ್ ಪತ್ತಾರ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಬೆಳಗಿನ ಜಾವ ಸಾವನ್ನಪ್ಪಿದ್ದಾರೆ.

ಇನ್ನೊಬ್ಬ ಸಹೋದರ ರವಿಶಂಕರ್ ಪತ್ತಾರ ಅವರಿಗೂ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತಿತ್ತು. ನಿನ್ನೆ ರಾತ್ರಿ ಚೇತರಿಸಿಕೊಂಡು ಗುಣಮುಖರಾಗಿದ್ದರು. ಆದರೆ ಮಂಗಳವಾರ ದಿಢೀರ್ ಎಂದು ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದಲ್ಲಿನ ಮೂವರು ಸಹೋದರರು ಒಂದು ವಾರದ ಅಂತರದಲ್ಲಿ ಸಾವನ್ನಪ್ಪಿರುವುದರಿಂದ ಕುಟುಂಬವೇ ಶೋಕಸಾಗರದಲ್ಲಿ ಮುಳುಗಿದೆ.

ವರದಿ: ಶ್ರೀನಿವಾಸ ಎಂ ಜೆ
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT