ರಾಜ್ಯ

ಬೆಂಗಳೂರು ಗಲಭೆಯಲ್ಲಿ ನಿಜವಾಗಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಪೊಲೀಸ್ ಆಯುಕ್ತರಿಗೆ ಮುಸ್ಲಿಂ ಮುಖಂಡರು

Manjula VN

ಬೆಂಗಳೂರು: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸದೆ, ಗಲಭೆಯಲ್ಲಿ ನಿಜವಾಗಿಯೂ ಭಾಗಿಯಾಗಿದ್ದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಮುಸ್ಲಿಂ ಮುಖಂಡರ ನಿಯೋಗ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರನ್ನು ಭೇಟಿಯಾಗಿ ಮನವಿ ಮಾಡಿತು. 

ಮಂಗಳವಾರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿದ ನಿಯೋಗವು ಗಲಭೆ ಕುರಿತು ಪಾರದರ್ಶಕ ತನಿಖೆ ನಡೆಸಬೇಕು. ಗಲಭೆಗೆ ಸಂಬಂಧಿಸಿದಂತೆ ಆರೋಪಿಗಳ ಜೊತೆಯಲ್ಲಿ ಅಮಾಯಕರನ್ನೂ ಬಂಧನಕ್ಕೊಳಪಡಿಸಲಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. 

ಬಳಿಕ ಮಾತನಾಡಿದ ವಿಧಾನ ಪರಿಷತ್ತು ಸದಸ್ಯ ಸಿ.ಎಂ.ಇಬ್ರಾಹಿಂ ಅವರು, ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ದುರಾದೃಷ್ಟಕರ. ಇದು ಜಾತಿ ಗಲಭೆಯಲ್ಲ. ಘಟನೆ ನಡೆಯದಂತೆ ಪೊಲೀಸರು ತಕ್ಷಣ ಕ್ರಮಕೈಗೊಳ್ಳಲಿಲ್ಲ ಎಂದರು. 

ಶಾಸಕ. ಎನ್.ಎ.ಹ್ಯಾರಿಸ್. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ರಾಜ್ಯಸಭಾ ಸದಸ್ಯ ಸಯ್ಯದ ನಾಸೀರ್ ಹುಸೇನ್, ಶಾಸಕ ತನ್ವೀರ್ ಸೇಠ್ ಇತರ ಮುಸ್ಲಿಂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು. 

SCROLL FOR NEXT