ರಾಜ್ಯ

ಕಾರವಾರ: ಟ್ವಿಟ್ಟರ್ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಬಿಜೆಪಿ ಮುಖಂಡನಿಂದ ದೂರು ದಾಖಲು

Shilpa D

ಕಾರವಾರ: ನಿಷೇಧಿತ ‘ಸಿಖ್ ಫಾರ್ ಜಸ್ಟೀಸ್’ (ಎಸ್.ಎಫ್.ಜೆ) ಸಂಘಟನೆಯಿಂದ ದೇಶವಿರೋಧಿ ಚಟುವಟಿಕೆಗಳ ಟ್ವೀಟ್‌ಗೆ ಅವಕಾಶ ನೀಡಿದ ಆರೋಪದಲ್ಲಿ ಟ್ವಿಟರ್ ಸಂಸ್ಥೆಯ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಬಿಜೆಪಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಪ್ರಸಾದ ಹೆಗಡೆ ದೂರು ದಾಖಲಿಸಿದ್ದು, ಪಂಜಾಬ್ ಅನ್ನು ಖಲಿಸ್ತಾನ ಎಂಬ ಹೆಸರಿನಲ್ಲಿ ಭಾರತದಿಂದ ಬೇರ್ಪಡಿಸುವ ಸಂಚನ್ನು ರೂಪಿಸಿದ್ದ ಎಸ್.ಎಫ್.ಜೆ.ಯನ್ನು 2019ರಲ್ಲಿ ಕೇಂದ್ರ ಸರ್ಕಾರ ನಿಷೇಧಿಸಿತ್ತು.  ಕೇಂದ್ರ ಸರ್ಕಾರ ನಿಷೇಧಿಸಿದ್ದರೂ ಸಂಘಟನೆಯ ಟ್ವಿಟರ್ ಖಾತೆ ಸಕ್ರಿಯವಾಗಿದೆ. ಅದರಲ್ಲಿ ಭಾರತ ವಿರೋಧಿ ಸಂಗತಿಗಳನ್ನು, ಭಯೋತ್ಪಾದಕ ಚಟುವಟಿಕೆಗಳನ್ನು ಪ್ರಚೋದಿಸುವಂತಹ ಟ್ವೀಟ್‌ಗಳನ್ನು ಮಾಡಲಾಗುತ್ತಿದೆ ಎಂದು  ಅವರು ದೂರಿದ್ದಾರೆ.

ದೇಶ ವಿರೋಧಿ ಕೆಲಸಗಳಿಗೆ ಪ್ರಚೋದನೆ ನೀಡುವ ಬರಹಗಳನ್ನು ಹಾಕಿದರೂ ಟ್ವಿಟರ್ ಅವುಗಳ ಕುರಿತು ನಿಗಾ ವಹಿಸಿಲ್ಲ. ದೇಶ ವಿರೋಧಿ ಹೇಳಿಕೆಗಳ ಟ್ವೀಟ್‌ಗಳನ್ನು ಪ್ರಕಟಿಸಲು ಸಂಸ್ಥೆ ಉತ್ಸುಕವಾಗಿದೆ. ಹಾಗಾಗಿ ಸಂಸ್ಥೆಯ ಹಾಗೂ ಆಡಳಿತಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

SCROLL FOR NEXT