ಕಲಬುರಗಿ: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂ ಮತ್ತು ಸಾಂಸ್ಕೃತಿ ಸಂಘದ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ಯೋಜನೆಗೆ ರೂ.300 ರೋಚಿ ಮಂಜೂರು ಮಾಡಿರುವ ಸಿಎಂ ಯಡಿಯೂರಪ್ಪ ಅವರು, ಕೂಡಲೇ ರೂ.100 ಕೋಟಿ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರಂದು ತಿಳಿದುಬಂದಿದೆ.
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ್ ಪಾಟೀಲ್ ಸೇಡಂ ಅವರೊಂದಿಗೆ ಬೆಂಗಳೂರಿನಲ್ಲಿಂದು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಿದ ಮುಖ್ಯಮಂತ್ರಿಯವರು ಕೂಡಲೇ ರೂ.100 ಕೋಟಿ ಬಿಡುಗಡೆ ಮಾಡುವಂತೆ ಸಭೆಯಲ್ಲಿ ಆದೇಶ ನೀಡಿದ್ದಾರೆ.