ಉಮೇಶ್ ಜಾಧವ್ ಮತ್ತು ಅವಿನಾಶ್ ಜಾಧವ್ 
ರಾಜ್ಯ

ಸಂಸದ ಡಾ.ಉಮೇಶ್ ಜಾಧವ್, ಪುತ್ರ ಅವಿನಾಶ್ ಗೂ ಕೊರೊನಾ: ಬೌರಿಂಗ್ ಆಸ್ಪತ್ರೆಗೆ ದಾಖಲು

ಕಲಬುರಗಿಯಲ್ಲಿ ಕೊರೊನಾ ತಾಂಡವವಾಡುತ್ತಿದ್ದು, ಇದೀಗ ಸಂಸದ ಡಾ.ಉಮೇಶ್ ಜಾಧವ್ ಹಾಗೂ ಅವರ ಪುತ್ರ ಶಾಸಕ ಡಾ. ಅವಿನಾಶ್ ಜಾಧವ್ ಅವರಿಗೂ ಕೊರೊನಾ ವಕ್ಕರಿಸಿದೆ.

ಕಲಬುರಗಿ: ಕಲಬುರಗಿಯಲ್ಲಿ ಕೊರೊನಾ ತಾಂಡವವಾಡುತ್ತಿದ್ದು, ಇದೀಗ ಸಂಸದ ಡಾ.ಉಮೇಶ್ ಜಾಧವ್ ಹಾಗೂ ಅವರ ಪುತ್ರ ಶಾಸಕ ಡಾ. ಅವಿನಾಶ್ ಜಾಧವ್ ಅವರಿಗೂ ಕೊರೊನಾ ವಕ್ಕರಿಸಿದೆ.

ಕಲಬುರಗಿ ಸಂಸದ ಡಾ. ಉಮೇಶ ಜಾಧವ್ ಹಾಗೂ ಚಿಂಚೋಳಿ ಶಾಸಕ ಡಾ. ಅವಿನಾಶ ಜಾಧವ್ ಉಭಯ ನಾಯಕರಿಗೆ ಬುಧವಾರ ಸಂಜೆ 4 ಗಂಟೆಗೆ ಕೊರೊನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ.

ಬೆಂಗಳೂರಿನಲ್ಲಿರುವ ಅವರು ಖಾಸಗಿ ಆಸ್ಪತ್ರೆಯತ್ತ ಮುಖಮಾಡದೇ ತಕ್ಷಣವೇ ಬೆಂಗಳೂರಿನ ಸರ್ಕಾರಿ ಬೌರಿಂಗ್ ಆಸ್ಪತ್ರೆಗೆ
ದಾಖಲಾಗುವ ಮೂಲಕ ಮಾದರಿಯಾಗಿದ್ದಾರೆ.

ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹೇಳಿರುವ ಡಾ. ಜಾಧವ್, ಈಗಾಗಲೇ ತಮ್ಮ ಜತೆ ಇದ್ದ 40ಕ್ಕೂ ಹೆಚ್ಚು ಜನರ ತಪಾಸಣೆ ಮಾಡಿಸಿದ್ದಾರೆ. ಸಂಸದ ಡಾ. ಉಮೇಶ್‌ ಜಾಧವ್‌ ಸಂಸದರಾಗಿದ್ದು, ಪುತ್ರ ಅವಿನಾಶ್‌ ಚಿಂಚೋಳಿ ಶಾಸಕರಾಗಿದ್ದಾರೆ. ಇಬ್ಬರೂ ವೈದ್ಯರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಜ್ಞಾನೇಶ್ ಕುಮಾರ್, ಪ್ರಧಾನಿ ಮೋದಿ ಇಬ್ಬರೂ ಮನೆಗೆ ಹೋಗುತ್ತಾರೆ, ನಂತರ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!