ಕೆ ಸುಧಾಕರ್ 
ರಾಜ್ಯ

ಆರೋಗ್ಯಾಧಿಕಾರಿಯ ಸಾವಿನ ವಿಚಾರವನ್ನು ಅನ್ಯ ಕಾರಣಗಳಿಗೆ ಬಳಸಬೇಡಿ: ಸಚಿವ ಡಾ.ಕೆ.ಸುಧಾಕರ್ ಮನವಿ

ಆತ್ಮಹತ್ಯೆ ಮಾಡಿಕೊಂಡ ಕೊರೊನಾ ಸೇನಾನಿ ನಂಜನಗೂಡಿನ ಆರೋಗ್ಯಾಧಿಕಾರಿ ಡಾ.ಎಸ್.ಆರ್.ನಾಗೇಂದ್ರ ಅವರ ಕುಟುಂಬಕ್ಕೆ ನಮ್ಮ ಸರ್ಕಾರ ಕೂಡಲೇ 30 ಲಕ್ಷ ರೂ. ಪರಿಹಾರ ಘೋಷಿಸಿದೆ.

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ಕೊರೊನಾ ಸೇನಾನಿ ನಂಜನಗೂಡಿನ ಆರೋಗ್ಯಾಧಿಕಾರಿ ಡಾ.ಎಸ್.ಆರ್.ನಾಗೇಂದ್ರ ಅವರ ಕುಟುಂಬಕ್ಕೆ ನಮ್ಮ ಸರ್ಕಾರ ಕೂಡಲೇ 30 ಲಕ್ಷ ರೂ. ಪರಿಹಾರ ಘೋಷಿಸಿದೆ. ಆದರೆ ಅವರ ಸಾವಿನ ವಿಚಾರವನ್ನು ಅನ್ಯ ಕಾರಣಗಳಿಗೆ ದುರ್ಬಳಕೆ ಮಾಡಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೋರಿದ್ದಾರೆ.

"ಆರೋಗ್ಯಾಧಿಕಾರಿ ನಾಗೇಂದ್ರ ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗವನ್ನು ಕೂಡ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ. ಮೃತರ ಕುಟುಂಬದೊಂದಿಗೆ ಸರ್ಕಾರ ಸದಾ ಬೆಂಬಲವಾಗಿ ನಿಲ್ಲಲಿದೆ. ಆದರೆ ಅವರ ಸಾವಿನ ವಿಚಾರವನ್ನು ಬೇರೆ ಕಾರಣಗಳಿಗೆ ಬಳಸಬಾರದು. ವೈದ್ಯಾಧಿಕಾರಿಗಳ ಸಂಘದೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು, ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು. ನಾಗೇಂದ್ರ ಅವರ ಸಾವಿನಲ್ಲಿ ಗೊಂದಲ ಸೃಷ್ಟಿ ಮಾಡುವುದು ಅಮಾನವೀಯವಾಗುತ್ತದೆ. ಘಟನೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನ್ಯಾಯ ದೊರಕಿಸಿಕೊಡಲಾಗುವುದು" ಎಂದು ಅವರು ತಿಳಿಸಿದ್ದಾರೆ.

ತನಿಖೆಗೆ ಆದೇಶ

"ನಾಗೇಂದ್ರ ಅವರು ಜನಪರ, ಸಹೃದಯಿ ಹಾಗೂ ಬಹಳ ಸೂಕ್ಷ್ಮ ಮನಸ್ಸಿನವರು ಎಂದು ತಿಳಿಯಿತು. ಒಬ್ಬ ವೈದ್ಯನಾಗಿ ಅವರ ಸಾವಿನ ನೋವು ನನಗೂ ಅರ್ಥವಾಗುತ್ತದೆ. ಅವರ ಸಾವಿನ ತನಿಖೆಗೆ ಆದೇಶ ಮಾಡಿದ್ದು, ಕುಟುಂಬಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ" ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

"ಕೊರೊನಾ ವಾರಿಯರ್ ಗಳ ಕಷ್ಟಕ್ಕೆ ಸರ್ಕಾರ ಸದಾ ಸ್ಪಂದಿಸುತ್ತದೆ. ವೈದ್ಯ ಸಿಬ್ಬಂದಿ ಕೆಲಸದ ಒತ್ತಡದಿಂದ ಮಾನಸಿಕ ಒತ್ತಡಕ್ಕೊಳಗಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ರಜೆ, ಒತ್ತಡ ಕಡಿಮೆ ಮಾಡಲು ಎಲ್ಲ ಬಗೆಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಕೊರೊನಾ ವಾರಿಯರ್ ಗಳಿಗೆ ಏನೇ ಒತ್ತಡಗಳಿದ್ದರೂ ಮೇಲಧಿಕಾರಿಗಳ ಬಳಿ ಹೇಳಿಕೊಳ್ಳಬೇಕು" ಎಂದು ಸಚಿವರು ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT