ರಾಜ್ಯ

ಬಿಬಿಎಂಪಿ ಚುನಾವಣೆಗಾಗಿ ಬಿಜೆಪಿಯಿಂದ ಡಿ.ಜೆ. ಹಳ್ಳಿ ಗಲಭೆ- ಸಂಸದ ಡಿ. ಕೆ. ಸುರೇಶ್

Nagaraja AB

ಬೆಂಗಳೂರು: ಡಿ.ಜೆ ಹಳ್ಳಿ ಪ್ರಕರಣಕ್ಕೂ ಫೋನ್ ಟ್ಯಾಪಿಂಗ್‌ಗೂ ಸಂಬಂಧವಿಲ್ಲ.ಕಾಂಗ್ರೆಸ್ ನಾಯಕರ ಫೋನ್ ಟ್ಯಾಪಿಂಗ್ ಆರೋಪವಲ್ಲ, ಅದು ಸತ್ಯ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿಯವರು ಡಿ.ಜೆ ಹಳ್ಳಿ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಸುತ್ತಿದ್ದಾರೆ. ವಾಸ್ತವಾಂಶವೇ ಬೇರೆಯಿದೆ.ಬಿಬಿಎಂಪಿ‌ ಚುನಾವಣೆ ಎದುರಾಗುತ್ತಿದೆ. ಅದಕ್ಕಾಗಿ ಇಲ್ಲಿನ ಬಿಜೆಪಿ ನಾಯಕರು ಚುನಾವಣಾ ರಾಜಕೀಯ ಮಾಡುತ್ತಿದ್ದಾರೆ. ಅದಕ್ಕಾಗಿ ಪೊಲೀಸರ ಮೇಲೆ ಒತ್ತಡ ತರುತ್ತಿದ್ದಾರೆ ಎಂದರು.

ಬಿಜೆಪಿಯವರು ಸಾವಿನ ಮೇಲೆ ಹೆಣದ ರಾಜಕೀಯ ಮಾಡಿದವರು.ಇದೀಗ ಡಿ.ಜೆ.ಹಳ್ಳಿ ಪ್ರಕರಣವನ್ನು ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದರು.

ಡಿಜೆ ಹಳ್ಳಿ ಪ್ರಕರಣದಲ್ಲಿ ಗುಪ್ತಚರ ಇಲಾಖೆಯ ವೈಫಲ್ಯವಿದೆ. ವೈಫಲ್ಯವನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.ಡಿ.ಜೆ.ಹಳ್ಳಿ ಗಲಭೆಗೆ ಗುಪ್ತಚರ ವೈಫಲ್ಯವೇ ಕಾರಣ ಎಂಬುದನ್ನು ಸರ್ಕಾರ ಒಪ್ಪಿಕೊಳ್ಳಬೇಕು ಎಂದು ಡಿ.ಕೆ.ಸುರೇಶ್ ಒತ್ತಾಯಿಸಿದರು.

SCROLL FOR NEXT