ಕೊರೋನಾ ಭೀತಿ 
ರಾಜ್ಯ

ಕೊರೋನಾ ವೈರಸ್: ಕರ್ನಾಟಕದಲ್ಲಿ ಗುಣಮುಖ ಸೋಂಕಿತರ ದಾಖಲೆ, ಒಂದೇ ದಿನ 8061 ಮಂದಿ ಡಿಸ್ಚಾರ್ಜ್

ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವಂತೆಯೇ ಇತ್ತ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಾಖಲೆ ಮಟ್ಟದಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವಂತೆಯೇ ಇತ್ತ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ದಾಖಲೆ ಮಟ್ಟದಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಹೌದು.. ಇಂದು ಒಂದೇ ದಿನ ರಾಜ್ಯಾದ್ಯಂತ ಬರೊಬ್ಬರಿ 8061 ಮಂದಿ ಸೋಂಕಿತರು ಗುಣಮುಖರಾಗಿದ್ದು, ಇದು ರಾಜ್ಯದಲ್ಲಿ ಒಂದು ದಿನದ ಗರಿಷ್ಠ ಸೋಂಕಿತರ ಗುಣಮುಖವಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 8061 ಮಂದಿ ಗುಣಮುಖರಾಗಿದ್ದು, ಆ ಮೂಲಕ  ರಾಜ್ಯದಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಪ್ರಮಾಣ 1,97,625ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವುದು ಹಾಗೂ ಚೇತರಿಕೆ ಪ್ರಮಾಣ ಹೆಚ್ಚುತ್ತಿರುವುದ ಉತ್ತಮ ಬೆಳವಣಿಗೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ

ಅಂತೆಯೇ ಇಂದು 5851 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ಆ ಮೂಲಕ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 2,83,665ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 81,211 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ 130 ಮಂದಿ ಸಾವಿಗೀಡಾಗಿದ್ದಾರೆ  ಹಾಗೂ ಈವರೆಗೂ 4,810 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ಇಂದು ಒಂದೇ 1918, ಬೆಳಗಾವಿ 319, ಬಳ್ಳಾರಿ 306, ಮೈಸೂರು 202, ಶಿವಮೊಗ್ಗ 220, ಕೊಪ್ಪಳದಲ್ಲಿ 271 ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!