ಕೋಟ ಶ್ರೀನಿವಾಸ ಪೂಜಾರಿ 
ರಾಜ್ಯ

ಕೊಡೇರಿ ದೋಣಿ ದುರಂತ: ಮೀನುಗಾರರ ಕುಟುಂಬಗಳಿಗೆ ತಲಾ 6 ಲಕ್ಷ ರೂ ಪರಿಹಾರ

ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತದಲ್ಲಿ  ಮೃತಪಟ್ಟ ನಾಲ್ಕು ಮೀನುಗಾರರ ಕುಟುಂಬಗಳಿಗೆ ತಲಾ 6 ಲಕ್ಷ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

ಬೈಂದೂರು: ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತದಲ್ಲಿ  ಮೃತಪಟ್ಟ ನಾಲ್ಕು ಮೀನುಗಾರರ ಕುಟುಂಬಗಳಿಗೆ ತಲಾ 6 ಲಕ್ಷ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

ಪರಿಹಾರದ ಆದೇಶದ ಪ್ರತಿಯನ್ನು ಸಂತ್ರಸ್ತರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೋಮವಾರ ತಿಳಿಸಿದ್ದಾರೆ.

ಇಂದು ಸಚಿವರು ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ಅವರೊಂದಿಗೆ ಸಂತ್ರಸ್ತರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು.

ಆಗಸ್ಟ್ 16 ರಂದು ಬೃಹತ್ ಅಲೆಗಳು ದೋಣಿಯನ್ನು ಮುಳುಗಿಸಿದ ನಂತರ ಮಂಜುನಾಥ್ ಖಾರ್ವಿ, ಲಕ್ಷ್ಮಣ್ ಖಾರ್ವಿ, ಶೇಖರ್ ಖಾರ್ವಿ ಮತ್ತು ನಾಗರಾಜ್ ಖಾರ್ವಿ ಎಂಬ ನಾಲ್ವರು ನಾಪತ್ತೆಯಾಗಿದ್ದು ಸುಮಾರು ಎರಡು ದಿನಗಳ ನಂತರ ಎಲ್ಲರ ಶವಗಳೂ ಪತ್ತೆಯಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!