ಭ್ರಷ್ಟಾಚಾರ ನಿಗ್ರಹ ದಳ 
ರಾಜ್ಯ

ಟಿಡಿಆರ್ ಅಕ್ರಮ: ಪಾಲಿಕೆ ಎಂಜಿನಿಯರ್, ಮಧ್ಯವರ್ತಿಗಳ ನಿವಾಸಗಳ ಮೇಲೆ ಎಸಿಬಿ ದಾಳಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ವ್ಯಾಪ್ತಿಯಲ್ಲಿ ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್) ಅವ್ಯವಹಾರ ನಡೆದಿರುವುದನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಯಲಿಗೆಳೆದಿದ್ದು, ಪಾಲಿಕೆ ಸಹಾಯಕ ಎಂಜಿನಿಯರ್ ಸೇರಿದಂತೆ ನಾಲ್ವರ ನಿವಾಸಗಳ ಮೇಲೆ ದಾಳಿ ನಡೆಸಿ  ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ವ್ಯಾಪ್ತಿಯಲ್ಲಿ ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್) ಅವ್ಯವಹಾರ ನಡೆದಿರುವುದನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಯಲಿಗೆಳೆದಿದ್ದು, ಪಾಲಿಕೆ ಸಹಾಯಕ ಎಂಜಿನಿಯರ್ ಸೇರಿದಂತೆ ನಾಲ್ವರ ನಿವಾಸಗಳ ಮೇಲೆ ದಾಳಿ ನಡೆಸಿ  ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ನಗರದ ಕೊತ್ತನೂರು-ಆವಲಹಳ್ಳಿ ಮುಖ್ಯರಸ್ತೆ ಅಗಲೀಕರಣಕ್ಕೆ ವಶಪಡಿಸಿಕೊಳ್ಳಬೇಕಾದ ನಿವೇಶನಗಳ ಮತ್ತು ಕಟ್ಟಡಗಳ ಜಾಗಕ್ಕಿಂತ ಹೆಚ್ಚು ಜಾಗಕ್ಕೆ ಕೃಷಿ ಭೂಮಿಯ ದರಗಳನ್ನು ನಿಗದಿ ಮಾಡಿ ಟಿಡಿಆರ್ ವಿಸ್ತೀರ್ಣವನ್ನು ಕಾನೂನು ಬಾಹಿರವಾಗಿ ವಿತರಣೆ ಮಾಡಿ ಸರ್ಕಾರಕ್ಕೆ ಮತ್ತು ಬಿಬಿಎಂಪಿಗೆ ಕೋಟ್ಯಂತರ ರು.  ನಷ್ಟವನ್ನುಂಟು ಮಾಡಲಾಗಿದೆ ಎಂಬ ಆರೋಪದ ಮೇಲೆ ಎಸಿಬಿ ಅಧಿಕಾರಿಗಳ ಕಾರ್ಯಾಚರಣೆ ಕೈಗೊಂಡರು. ಬಿಬಿಎಂಪಿ ಸಹಾಯಕ ಎಂಜಿನಿಯರ್ ಎಂ.ಎನ್.ದೇವರಾಜು ಅವರ ಎಚ್‌ಎಸ್‌ಆರ್ ಲೇಔಟ್‌ನ ವಾಸದ ಮನೆ,ಮಧ್ಯವರ್ತಿ ಕೆ.ಪಿ.ನಾಗೇಶ್ ಅವರ ಬಿದರಹಳ್ಳಿ ಹೋಬಳಿಯ ಕಣ್ಣೂರು ಗ್ರಾಮದಲ್ಲಿನ  ವಾಸದ ಮನೆ,ಮಧ್ಯವರ್ತಿ ಬಿ.ನಾಗರಾಜು ಅವರ ದೊಡ್ಡಗುಬ್ಬಿಯ ಯರಪ್ಪನಹಳ್ಳಿ ಗ್ರಾಮದಲ್ಲಿನ ವಾಸದ ಮನೆ,ಟಿಡಿಆರ್ ಅರ್ಜಿದಾರ ಸುಬ್ಬರಾವ್ ಅವರ ಬಿದರಹಳ್ಳಿಯ ರಾಂಪುರದಲ್ಲಿನ ವಾಸದ ಮನೆಯ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡೆದು ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರು ಪೂರ್ವ ತಾಲೂಕು ರಾಂಪುರದ ಸರ್ವೆ ನಂಬರ್ 149ರಲ್ಲಿ ಅಕ್ರಮವಾಗಿ ಟಿಡಿಆರ್ ಮಂಜೂರಾಗಿತ್ತು. ಇದರಿಂದ ಸುಮಾರು 28 ಕೋಟಿ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಿ ದೂರು ದಾಖಲಿಸಲಾಗಿತ್ತು. ಈ ಸಂಬಂಧ ಎಸಿಬಿ ಎಫ್‌ಐಆರ್ ದಾಖಲಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಎಸಿಬಿ ಎಸ್ಪಿ  ಕಲಾಕೃಷ್ಣ ಸ್ವಾಮಿ ನೇತೃತ್ವದ ತಂಡದಿಂದ ನಾಲ್ಕು ಕಡೆ ದಾಳಿ ನಡೆದಿದೆ. ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಇರುವ ಸಹಾಯಕ ಎಂಜಿನಿಯರ್ ದೇವರಾಜ್ ಅವರ ನಿವಾಸಕ್ಕೆ ಬೆಳಗ್ಗೆ 9 ಗಂಟೆ ಸುಮಾರಿಗೆ 2 ವಾಹನಗಳಲ್ಲಿ ಬಂದ ಅಧಿಕಾರಿಗಳು, ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು. ಕಳೆದ ವರ್ಷ  ಡಿಸೆಂಬರ್‌ನಲ್ಲಿ ಅಕ್ರಮ ಟಿಡಿಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯಕ ಎಂಜಿನಿಯರ್ ದೇವರಾಜ್ ಅವರ ಬಂಧನ ಕೂಡಾ ಆಗಿತ್ತು.

ಕೆ.ಆರ್. ಪುರಂ ಬಳಿಯ ಕೌದೇನಹಳ್ಳಿ ಸಮೀಪ ಆಕ್ರಮ ಡಿಆರ್‌ಸಿ ನೀಡಿದ ಪ್ರಕರಣ ಸಂಬಂಧ ಕಳೆದ ವರ್ಷ ದೇವರಾಜ್ ಅವರ ಬಂಧನವಾಗಿತ್ತು. ಇದೀಗ ರಾಂಪುರದಲ್ಲಿ ಅಕ್ರಮ ಎಸಗಿರುವ ಆರೋಪದ ಮೇಲೆ ಎಸಿಬಿ ದಾಳಿ ನಡೆಸಿದೆ. ಬೆಂಗಳೂರಿನ ಬಿದರಹಳ್ಳಿಯ ಕಣ್ಣೂರು ಗ್ರಾಮದಲ್ಲಿ ಇರುವ ಬ್ರೋಕರ್  ನಾಗೇಶ್ ಅವರ ಐಶಾರಾಮಿ ಮನೆಯಲ್ಲೂ ಎಸಿಬಿ ಪರಿಶೀಲನೆ ಮುಂದುವರೆದಿದೆ. ಏಳಕ್ಕೂ ಹೆಚ್ಚು ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮನೆಯಲ್ಲಿ ಪತ್ತೆಯಾದ ದಾಖಲೆಗಳನ್ನು ಆಧರಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT