ರಾಜ್ಯ

ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ- ರಮೇಶ್ ಜಾರಕಿಹೊಳಿ

Nagaraja AB

ಬೆಂಗಳೂರು: ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ  ಜಲಸಂಪನ್ಮೂಲ ಇಲಾಖೆ ಬದ್ಧವಾಗಿರುವುದಾಗಿ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಕಳೆದ ವರ್ಷದ ನೀರಾವರಿ ಸಾಧನೆಯನ್ನೊಳಗೊಂಡ 'ಜಲ ಯಜ್ಞ' ಕಿರುಹೊತ್ತಿಗೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಲಭ್ಯವಿರುವ ಜಲಸಂಪನ್ಮೂಲವನ್ನು ಪರಿಣಾಮಕಾರಿ ಬಳಸಿಕೊಳ್ಳಲು ಅನೇಕ ಯೋಜನೆಗಳನ್ನು ಕೈಗೊಳ್ಳಲಾಗಿದೆ. ವಿವಿಧ ಯೋಜನೆಗಳಿಗಾಗಿ ನೀರನ್ನು ಹಂಚಿಕೆ ಮಾಡಲಾಗಿದೆ ಎಂದು ಹೇಳಿದರು.

ಜಲಸಂಪನ್ಮೂಲ ಇಲಾಖೆಯಿಂದ ಕೈಗೊಳ್ಳಲಾಗಿರುವ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು. ಕೇಂದ್ರದಿಂದ ಅನುಮೋದನೆ ಪಡೆಯಬೇಕಾದ ರಾಜ್ಯದಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಭರವಸೆಯನ್ನು ವ್ಯಕ್ತಪಡಿಸಿದರು.

ಕಳಸಾ ಬಂಡೂರಿ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಇಲಾಖೆ ಮತ್ತು ಸಚಿವರ ಪ್ರಯತ್ನವನ್ನು ಜಲಾ ಯಜ್ಞದಲ್ಲಿ
ವಿವರಿಸಲಾಗಿದೆ. ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿರುವ ನೀರಾವರಿ ಯೋಜನೆಗಳು, ಹಂಚಿಕೆಯಾದ ನೀರಿನ ಬಳಕೆ,
ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆ ಮತ್ತು ಸಂಪುಟದಿಂದ ಅನುಮೋದನೆಯಾಗಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗಿದೆ.

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರು ಹರಿಸುವ ಎತ್ತಿನಹೊಳೆ ಯೋಜನೆಯನ್ನು ಸರ್ಕಾರ ಕ್ರಮ ಕೈಗೊಂಡಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮಾರ್ಚ್ 2021ಕ್ಕೆ ಮೊದಲ ಹಂತದ ಕೆಲಸಗಳು ಪೂರ್ಣಗೊಳ್ಳಲಿವೆ.

ಕಾವೇರಿ ನೀರಾವರಿ ನಿಗಮ ನಿಯಮಿತ, ಕೃಷ್ಣಾ ಜಲ ಭಾಗ್ಯ ನಿಗಮ ಲಿಮೆಟೆಡ್, ಕರ್ನಾಟಕ ನೀರಾವರಿ ನಿಗಮ್ ಲಿಮೆಟೆಡ್ ಮತ್ತು ವಿಶ್ವೇಶ್ವರಯ್ಯ ಜಲ ನಿಗಮದಿಂದ ಕೈಗೊಳ್ಳಲಾಗಿರುವ ಯೋಜನೆಗಳ ಬಗ್ಗೆ ವಿವರಿಸಲಾಗಿದೆ.
 

SCROLL FOR NEXT