ಜಮೀರ್ ಅಹ್ಮದ್ ಖಾನ್ 
ರಾಜ್ಯ

ಕೊರೋನಾ ವೈರಸ್: ಸೋಂಕಿನಿಂದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಬೆಂಗಳೂರು: ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಶಾಸಕ ಜಮೀರ್ ಅಹ್ಮದ್ ಖಾನ್, 'ತಮ್ಮ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ ಅಭಿಮಾನಿಗಳಿಗೂ ಮತ್ತು ಚಿಕಿತ್ಸೆ ನೀಡಿದ ಆಸ್ಪತ್ರೆ ಸಿಬ್ಬಂದಿಗೆ ಜಮೀರ್ ಅಹ್ಮದ್ ಧನ್ಯವಾದ ತಿಳಿಸಿದ್ದಾರೆ.

'ಇಂದು ಕೊರೊನಾ ಸೋಂಕಿನಿಂದ ಗುಣಮುಖನಾಗಿ ಮನೆಗೆ ಮರಳುತ್ತಿದ್ದೇನೆ. ವೈದ್ಯರ ಸಲಹೆಯ ಮೇರೆಗೆ ಮುಂದಿನ 10 ದಿನಗಳ ಕಾಲ ನಾನು ಹೋಂ ಕ್ವಾರೆಂಟೈನ್‍ನಲ್ಲಿ ಇರಲಿದ್ದು, ನಂತರದಲ್ಲಿ ಸಕ್ರಿಯ ಜನಸೇವೆಗೆ ಮರಳಲಿದ್ದೇನೆ. ಈವರೆಗೆ ಅತ್ಯಂತ ಕಾಳಜಿಯಿಂದ ನನಗೆ ಚಿಕಿತ್ಸೆ ನೀಡಿದ ವಿಕ್ರಂ ಆಸ್ಪತ್ರೆಯ  ಎಲ್ಲಾ ವೈದ್ಯಕೀಯ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ. ಅಂತೆಯೇ, 'ನಾನು ಆಸ್ಪತ್ರೆಗೆ ದಾಖಲಾದ ದಿನವೇ ಕರೆ ಮಾಡಿ, ನನಗೆ ಧೈರ್ಯ ತುಂಬಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ ಆತ್ಮೀಯರು, ನಮ್ಮ ಪಕ್ಷದ ಹಿರಿಯ ನಾಯಕರೂ ಆದ ಸಿದ್ದರಾಮಯ್ಯನವರಿಗೂ ಹಾಗೂ ಮಾಜಿ  ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರಿಗೂ ಧನ್ಯವಾದಗಳು. ತಮ್ಮ ಪ್ರೀತಿ ಮತ್ತು ಕಾಳಜಿಗೆ ನಾನು ಆಭಾರಿ ಎಂದು ಹೇಳಿದ್ದಾರೆ.

ಅಲ್ಲದೆ ನಾನು ಶೀಘ್ರ ಗುಣಮುಖನಾಗುವಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತು ಮಹಾರಾಷ್ಟ್ರ, ಆಂಧ್ರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಜನರು ಮಸೀದಿ, ಮಂದಿರ, ಚರ್ಚ್ ಗಳಲ್ಲಿ ಪ್ರಾರ್ಥನೆ, ಹರಕೆ, ಪೂಜೆಗಳನ್ನು ಮಾಡಿದ್ದಾರೆ. ತಮ್ಮೆಲ್ಲರ ಪ್ರೀತಿಯ ಋಣ ದೊಡ್ಡದು. ತಮ್ಮ ಸೇವೆಯ ಮೂಲಕ ಅದನ್ನು  ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

4 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ