ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ: ಬಂಧಿತರಲ್ಲಿ 21 ಆರೋಪಿಗಳು ಅಪ್ರಾಪ್ತರು

ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಗಲಭೆ ಪ್ರಕರಣದಲ್ಲಿ 21ಕ್ಕೂ ಹೆಚ್ಚು ಅಪ್ರಾಪ್ತ ಬಾಲಕರು ಬಂಧಿತರಲ್ಲಿ ಸೇರಿದ್ದಾರೆ.

ಡಿಜೆ ಹಳ್ಳಿ ಹಿಂಸಾಚಾರ
Lingaraj Badiger
Updated On : 25 Aug 2020, 8:58 pm

ಬೆಂಗಳೂರು: ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಗಲಭೆ ಪ್ರಕರಣದಲ್ಲಿ  21ಕ್ಕೂ ಹೆಚ್ಚು ಅಪ್ರಾಪ್ತ ಬಾಲಕರು ಬಂಧಿತರಲ್ಲಿ ಸೇರಿದ್ದಾರೆ.

ಪ್ರಕರಣದಲ್ಲಿ ಸುಮಾರು 390ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ 21ಕ್ಕೂ ಹೆಚ್ಚು ಮಂದಿಗೆ ಇನ್ನೂ 18 ವರ್ಷ ಪೂರ್ಣಗೊಂಡಿಲ್ಲ.

ಗಲಭೆಯ  ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಡಿಯೋ, ಸಿಸಿಟಿವಿ ವೀಕ್ಷಣೆಗೆ ಪ್ರತ್ಯೇಕ ತಂಡ ರಚನೆ  ಮಾಡಲಾಗಿದ್ದು ಘಟನೆ ನಡೆದಾಗ ಬಹುತೇಕ ಅಪ್ರಾಪ್ತರು ಕಲ್ಲು ತೂರಾಟದಲ್ಲಿ ಭಾಗಿಯಾಗಿರುವ ವಿಚಾರ ಬಯಲಾಗಿದೆ.

Advertisement

Advertisement

ಈ ಮಧ್ಯೆ,  ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ನಿಬಂಧನೆಗಳನ್ನು ಹೇರಲು ನಿರ್ದೇಶನಗಳನ್ನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement