ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ: ತಲೆ ಮೇಲೆ ಕಲ್ಲು ಎತ್ತಿಹಾಕಿ ಮಹಿಳೆಯ ಬರ್ಬರ ಕೊಲೆ

ತಲೆ ಮೇಲೆ ಕಲ್ಲು ಎತ್ತಿಹಾಕಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ಹಾಸನ: ತಲೆ ಮೇಲೆ ಕಲ್ಲು ಎತ್ತಿಹಾಕಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ಬಿ.ಎಂ.  ರಸ್ತೆಯ ಎನ್‍.ಆರ್. ವೃತ್ತದ ಸಮೀಪವಿರುವ ಕನ್ನಿಕಾ ಪರಮೇಶ್ವರಿ ಸಹಕಾರಿ ಬ್ಯಾಂಕ್  ಮುಂಭಾಗ 45 ವರ್ಷದ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ.

ತಡರಾತ್ರಿ ದುಷ್ಕರ್ಮಿಗಳು ಆಕೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಹಾಸನದ ಪ್ರಮುಖ ರಸ್ತೆಯಲ್ಲೇ ಕೊಲೆ ನಡೆದಿರುವುದು ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ಕೊಲೆ ನಡೆದಿರುವ ಜಾಗ ಹಗಲಿನ ವೇಳೆ ಯಾವಾಗಲೂ ಜನಜಂಗುಳಿಯಿಂದ ತುಂಬಿರುತ್ತದೆ. ರಾತ್ರಿ ಯಾರೂ ಇಲ್ಲದ ವೇಳೆ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹಾಸನ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

ಮಾಜಿ ಪ್ರೇಯಸಿಯ ಮದುವೆಗೆ ಬಂದು ಗುಂಡು ಹಾರಿಸಿದ ಭಗ್ನ ಪ್ರೇಮಿ, Video ವೈರಲ್!

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

ಹಾರ್ನ್ ಮಾಡುವ ವಿಚಾರಕ್ಕೆ ಗಲಾಟೆ: 65ರ ವೃದ್ಧನ ಮೇಲೆ ಮನಸೋ ಇಚ್ಛೆ ಹಲ್ಲೆ, ರೌಡಿಶೀಟ್ ಗೆ ಪೊಲೀಸರ ಸಿದ್ಧತೆ? Video

SCROLL FOR NEXT