ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರಿನಲ್ಲಿಂದು ದಾಖಲೆಯ 3,284 ಕೇಸ್ ಪತ್ತೆ, ರಾಜ್ಯದಲ್ಲಿ 8,580 ಪ್ರಕರಣ, 3 ಲಕ್ಷ ಗಡಿ ದಾಟಿದ ಸೋಂಕು!

ಮಹಾಮಾರಿ ಕೊರೋನಾಗೆ ಬೆಂಗಳೂರು ತತ್ತರಿಸಿದ್ದು ಇಂದು ಒಂದೇ ದಿನ ದಾಖಲೆಯ 3,284 ಪ್ರಕರಣ ಪತ್ತೆಯಾಗಿದೆ. ಇನ್ನು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3 ಲಕ್ಷ ಗಡಿ ದಾಟಿದೆ.

ಸಂಗ್ರಹ ಚಿತ್ರ
Vishwanath S
Updated On : 26 Aug 2020, 7:59 pm

ಬೆಂಗಳೂರು: ಮಹಾಮಾರಿ ಕೊರೋನಾಗೆ ಬೆಂಗಳೂರು ತತ್ತರಿಸಿದ್ದು ಇಂದು ಒಂದೇ ದಿನ ದಾಖಲೆಯ 3,284 ಪ್ರಕರಣ ಪತ್ತೆಯಾಗಿದೆ. ಇನ್ನು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3 ಲಕ್ಷ ಗಡಿ ದಾಟಿದೆ.

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಒಂದೇ ದಿನ ದಾಖಲೆಯ 133 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,091ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಕೊರೋನಾ 8,580 ಮಂದಿ ತುತ್ತಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,00,406ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Advertisement

Advertisement

ಇಂದು 7,249 ಮಂದಿ ಡಿಸ್ಚಾರ್ಜ್ ಆಗಿದ್ದು 2,11,680 ಮಂದಿ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಇನ್ನು 83, 608 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement