ಬ್ರಾಡ್ ವೇ ರಸ್ತೆಯ ಕೋವಿಡ್ ಆಸ್ಪತ್ರೆ ಉದ್ಘಾಟನೆ: ಶೇ.1%ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿಗೆ ಐಸಿಯುನಲ್ಲಿ ಚಿಕಿತ್ಸೆ 
ರಾಜ್ಯ

ಬ್ರಾಡ್ ವೇ ರಸ್ತೆಯ ಕೋವಿಡ್ ಆಸ್ಪತ್ರೆ ಉದ್ಘಾಟನೆ: ಶೇ.1%ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿಗೆ ಐಸಿಯುನಲ್ಲಿ ಚಿಕಿತ್ಸೆ

4 ತಿಂಗಳ ಪರಿಶ್ರಮದಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆ ಇಲ್ಲದೆ ಕೋವಿಡ್ ರೋಗಿಗಳಿಗೆ ಸುಸಜ್ಜಿತ ಆಸ್ಪತ್ರೆ ಲಭ್ಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಬೆಂಗಳೂರು: 4 ತಿಂಗಳ ಪರಿಶ್ರಮದಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆ ಇಲ್ಲದೆ ಕೋವಿಡ್ ರೋಗಿಗಳಿಗೆ ಸುಸಜ್ಜಿತ ಆಸ್ಪತ್ರೆ ಲಭ್ಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿ ಬಿಬಿಎಂಪಿಯಿಂದ ನಿರ್ಮಾಣವಾದ ‘ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ'ಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, "ಬಿಬಿಎಂಪಿಯ ಕಟ್ಟಡ ನಾಲ್ಕು ವರ್ಷಗಳಿಂದ ಖಾಲಿ ಇತ್ತು. ಇಂತಹ ಸಂದರ್ಭದಲ್ಲಿ 20-25 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸುವ ಆಲೋಚನೆ ಬಂದಿತ್ತು. ಆದರೆ ಕೋವಿಡ್ ಸಂಕಷ್ಟವಿದ್ದ ಹಿನ್ನೆಲೆಯಲ್ಲಿ, ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರನ್ನು ಮನವಿ ಮಾಡಿದ್ದೆ. ಅವರು ತಕ್ಷಣ ಸ್ಪಂದಿಸಿ 11 ಕೋಟಿ ರೂ. ಮೌಲ್ಯದ ಉಪಕರಣಗಳನ್ನು ನೀಡಿದರು. ವಿಪ್ರೊ ಸಂಸ್ಥೆಯವರು ವೈದ್ಯ ಸಿಬ್ಬಂದಿಯನ್ನು ನಿಯೋಜಿಸಿದರು. ಈ ಸಂಸ್ಥೆಗಳ ನೆರವಿನಿಂದಾಗಿ ಸರ್ಕಾರದ ಮೇಲೆ ಹೊರೆ ಇಲ್ಲದೆ ಆಸ್ಪತ್ರೆ ನಿರ್ಮಾಣವಾಗಿದೆ. ಈ ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ" ಎಂದು ಹೇಳಿದರು.

"ಬಿಬಿಎಂಪಿ ದಕ್ಷಿಣ ವಲಯದಲ್ಲಿ ಅಧಿಕಾರಿಗಳು ಸೋಂಕು ಹರಡುವಿಕೆಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ಮಾಡಿದ್ದಾರೆ. ಅಲ್ಲಿನ ಜನರು ಸರ್ಕಾರ ಸೂಚಿಸಿದ ನಿಯಮಗಳನ್ನು ಪಾಲಿಸಬೇಕು" ಎಂದು ಸಚಿವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವಸತಿ ಸಚಿವ ವಿ.ಸೋಮಣ್ಣ ಉಪಸ್ಥಿತರಿದ್ದರು.

ಚರಕ ಆಸ್ಪತ್ರೆ

ಆಸ್ಪತ್ರೆಯಲ್ಲಿ ಪುರುಷರಿಗೆ 60, ಮಹಿಳೆಯರಿಗೆ 50 ಹಾಗೂ ಮಕ್ಕಳಿಗೆ 20 ಸೇರಿದಂತೆ ಒಟ್ಟು 130 ಹಾಸಿಗೆಗಳಿವೆ. 20 ಐಸಿಯು ಹಾಸಿಗೆ, 20 ವೆಂಟಿಲೇಟರ್ ಸೌಲಭ್ಯವಿದೆ.

ಕರ್ನಾಟಕದ ಕೋವಿಡ್ ಪರಿಸ್ಥಿತಿಯಲ್ಲಿ ಸುಧಾರಣೆ

ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದು, ಶೇ 1%ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿಗೆ ಐಸಿ ಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದ ಚೇತರಿಕೆ ಪ್ರಮಾಣ ಶೇ
.70% ಇದ್ದು, ಮರಣ ಪ್ರಮಾಣ ಶೇ.1.69%ರಷ್ಟಿದೆ ಎಂದು ಸಚಿವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಸಚಿವರು ಹೇಳಿದ ಇತರೆ ಅಂಶಗಳು

ಅನ್ ಲಾಕ್ ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಎಲ್ಲ ರಾಜ್ಯ ಸರ್ಕಾರಗಳು ಪಾಲಿಸುತ್ತಿವೆ. ತಿಂಗಳಾಂತ್ಯದಲ್ಲಿ ಪ್ರಧಾನಿಗಳು ಸಭೆ ನಡೆಸಿ ಸೂಕ್ತ ಮಾರ್ಗಸೂಚಿ ನೀಡುವ ನಿರೀಕ್ಷೆ ಇದೆ.

ಸೋಂಕಿತರ ಸಂಖ್ಯೆ ಹೆಚ್ಚುವ ಬಗ್ಗೆ ಆತಂಕಗೊಳ್ಳಬಾರದು. ರಾಜ್ಯದಲ್ಲಿ ಶೇ.70 ರಷ್ಟು ಮಂದಿ ಗುಣಮುಖರಾಗಿದ್ದಾರೆ. ಮರಣ ಪ್ರಮಾಣ ಕಡಿಮೆಯಾಗಿದೆ. ಇದು ಸರ್ಕಾರದ ಸಾಧನೆ. ಕೋವಿಡ್ ಗೆ ಸಂಬಂಧಿಸಿದ ಯಾವುದೇ ಖರೀದಿ ಪಾರದರ್ಶಕವಾಗಿ ನಡೆಯುತ್ತಿದೆ.

ಅಭಿನಂದನೆ:

ಶಿವಾಜಿನಗರದ ಎಚ್‍ಎಸ್‍ಐಎಸ್ ಘೋಷಾ ಆಸ್ಪತ್ರೆಯಲ್ಲಿ 17 ದಿನಗಳಲ್ಲಿ, ಕೋವಿಡ್ ಸೋಂಕಿತ 50 ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಲಾಗಿದೆ. ಆಸ್ಪತ್ರೆಯ ವೈದ್ಯರಿಗೆ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT