ಡಾ. ಸಿ.ಎನ್. ಅಶ್ವತ್ಥ ನಾರಾಯಣ 
ರಾಜ್ಯ

ಅಕ್ಟೋಬರ್ ನಿಂದ ಪದವಿ ತರಗತಿ ಆರಂಭ, ಸೆ.1 ರಿಂದಲೇ ಆನ್ ಲೈನ್ ತರಗತಿ:ಅಶ್ವತ್ಥನಾರಾಯಣ

ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ...

ಬೆಂಗಳೂರು: ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರಿನ ಸುಬ್ರಹ್ಮಣ್ಯ ನಗರದ ವಾರ್ಡ್ ಸಂಖ್ಯೆ 66ರಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಕೆಲ ಪದವಿ ಪರೀಕ್ಷೆಗಳು ನಡೆಯಲಿವೆ ಎಂದರು.

ರಾಜ್ಯ ಸರಕಾರವೂ ಮುಂದಿನ ತಿಂಗಳಿಂದ  ಅನ್ ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ. ಜತೆಗೆ, ಅಕ್ಟೋಬರ್ ತಿಂಗಳಿಂದಲೇ ಎಲ್ಲ ಕಾಲೇಜುಗಳನ್ನು ಆರಂಭಿಸಲಾಗುವುದು. ವಿದ್ಯಾರ್ಥಿಗಳು ಕೂಡ ತರಗತಿಗಳಿಗೆ ಹಾಜರಾಗಬೇಕಾಗುತ್ತದೆ ಎಂದರು.

ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT