ರಾಜ್ಯ

ಬೆಳಗಾವಿ: ಮೊದಲ ಕನ್ನಡ ಮೇಯರ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಸಿದ್ಧನಗೌಡ ಪಾಟೀಲ್ ನಿಧನ

ಬೆಳಗಾವಿಯ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಸಿದ್ಧನಗೌಡ ಪಾಟೀಲ್(87) ಅವರು ಅನಾರೋಗ್ಯದಿಂದ ಬುದವಾರ ನಿಧನ ಹೊಂದಿದರು.

ಬೆಳಗಾವಿ:  ಬೆಳಗಾವಿಯ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಸಿದ್ಧನಗೌಡ ಪಾಟೀಲ್(87) ಅವರು ಅನಾರೋಗ್ಯದಿಂದ ಬುದವಾರ ನಿಧನ ಹೊಂದಿದರು.

ಬೆಳಗಾವಿ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಎನಿಸಿಕೊಂಡಿದ್ದಂತ ಸಿದ್ದನಗೌಡ ಪಾಟೀಲ(87) ಅವರು ಇಲ್ಲಿನ ಶಿವಬಸವನಗರದ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲದ ಸರಿಗೆ ಮಲ್ಲಾಪುರ ಗ್ರಾಮದ ಕೃಷಿಕ ಕುಟುಂಬವೊಂದರಲ್ಲಿ 1934,ಏಪ್ರಿಲ್ 18ರಂದು ಸಿದ್ದನಗೌದ ಜನಿಸಿದ್ದರು.  ಪ್ರಾಂತ್ಯಗಳ ವಿಂಗಡನೆ ಸಮಯದಲ್ಲಿ ಬಳ್ಲಾರಿಯನ್ನು ಆಂಧ್ರಪ್ರದೇಶಕ್ಕೆ ಸೇರಿಸಿದ ಸಮಯ ಅಂದಿನ ಪ್ರಧಾನಿ ಜವಹರಲಾಲ್ ನೆಹರು ಬೆಳಗಾವಿಗೆ ಆಗಮಿಸಿದ್ದ ವೇಳೆ ಅವರಿಗೆ ಕಪ್ಪು ಬಾವುಟ ತೋರಿಸಿ ವಿರೋಧ ವ್ಯಕ್ತಪಡಿಸಿದ್ದರು.

ಸತತ 2 ಬಾರಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿದ್ದ ಸಸಿದ್ದನಗೌಡ ನಾಡು ನುಡಿ, ಗಡಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರ್ತಿಸಿಕೊಂಡಿದ್ದರು. 1956ರಿಂದಲೂ ಕನ್ನಡ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. 1984ರಲ್ಲಿ ಬೆಳಗಾವಿ ಪಾಲಿಕೆಯ ಸದಸ್ಯರಾಗಿ, 1990ರಲ್ಲಿ ಮತ್ತೆ ಪುನರಾಯ್ಕೆಯಾಗಿ, ಆನಂತರ 1991ರಲ್ಲಿ ಬೆಳಗಾವಿಯ ಪ್ರಥಮ ಕನ್ನಡ ಮಹಾಪೌರರಾಗಿ ಆಯ್ಕೆಗೊಂಡಿದ್ದರು. ಅನೇಕ ಕನ್ನಡ ಪರ ಸಂಘಟನೆಗಳು ಇವರ ನಿಧನಕ್ಕೆ ಶೋಕ ವ್ಯಕ್ತಪಡಿಸಿವೆ. 

ಇಂದು ಮಧ್ಯಾಹ್ನ 3 ಗಂಟೆಗೆ ಅವರ ಸ್ವಗ್ರಾಮ ನೇಸರಗಿ ಸಮೀಪದ ಮಲ್ಲಾಪುರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT