ನಾರಾಯಣ ಗೌಡ 
ರಾಜ್ಯ

ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರ ನಿಷೇಧಿಸುವಂತೆ ಸಿಎಂ ಗೆ ನಾರಾಯಣಗೌಡ ಮನವಿ

ಕಬ್ಬನ್ ಉದ್ಯಾನವನದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಬೇಕೆ ಬೇಡವೇ ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಮಂಗಳವಾರ ತೋಟಗಾರಿಕೆ ಇಲಾಖೆ ಸಚಿವ ಡಾ. ನಾರಾಯಣ ಗೌಡ ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿ, ಅಭಿಪ್ರಾಯ ಪಡೆದುಕೊಂಡಿದ್ದಾರೆ. 

ಬೆಂಗಳೂರು: ಕಬ್ಬನ್ ಉದ್ಯಾನವನದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಬೇಕೆ ಬೇಡವೇ ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಮಂಗಳವಾರ ತೋಟಗಾರಿಕೆ ಇಲಾಖೆ ಸಚಿವ ಡಾ. ನಾರಾಯಣ ಗೌಡ ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿ, ಅಭಿಪ್ರಾಯ ಪಡೆದುಕೊಂಡಿದ್ದಾರೆ. 

ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಸಹ ಕಬ್ಬನ್ ಉದ್ಯಾನದಲ್ಲಿ ವಾಹನ ಸಂಚಾರ ನಿಷೇಧಿಸಬೇಕೆಂಬ ನಿರ್ಣಯವನ್ನು ಜೂನ್ 30 ರಂದು ನಡೆದ ಸಭೆಯಲ್ಲಿ ತೆಗೆದುಕೊಂಡಿದೆ. ಜೂನ್ 3 ರಂದು ನಡೆದ ಭರವಸೆಗಳ ಸಮಿತಿ  ಸಭೆಯಲ್ಲೂ ವಾಹನ ಸಂಚಾರ ನಿಷೇಧಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಹಿಂದೆ ಪ್ರತಿ ಭಾನುವಾರ, ಸರ್ಕಾರಿ ರಜಾದಿನಗಳಂದು ಕಬ್ಬನ್ ಪಾರ್ಕ್‍ನಲ್ಲಿ ವಾಹನ ಸಂಚಾರ ಸ್ಥಗಿತ ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಡಾ.ನಾರಾಯಣ ಗೌಡ ಅವರು ಇಲಾಖೆಯ ಹಿರಿಯ
ಅಧಿಕಾರಿಗಳೊಂದಿಗೆ ಚರ್ಚಿಸಿ ವಾಹನ ಸಂಚಾರ ನಿಷೇಧಿಸುವ ನಿರ್ಣಯ ತೆಗೆದುಕೊಂಡು ಅಂತಿಮ ತೀರ್ಮಾನಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. 

ರಾಜಧಾನಿಯ ಹೃದಯ ಭಾಗದಲ್ಲಿರುವ ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ಎಂದು ಪರಿಸರ ಪ್ರೇಮಿಗಳಿಂದ ಒತ್ತಾಯ ಬಂದಿತ್ತು. ಅಲ್ಲದೆ ಕಬ್ಬನ್ ಉದ್ಯಾನ ಕರ್ನಾಟಕ ಸರ್ಕಾರಿ ಉದ್ಯಾನಗಳ (ಸಂರಕ್ಷಣೆ) ಅಧಿನಿಯಮ 1975 ರ ವ್ಯಾಪ್ತಿಗೆ ಒಳಪಟ್ಟಿದೆ. ಹೀಗಾಗಿ ವಾಹನ ಸಂಚಾರ ನಿಷೇಧಿಸುವುದು ಅವಶ್ಯಕವಾಗಿದೆ.

5 ರಿಂದ 6 ಸಾವಿರ ಜನ ಪ್ರತಿ ನಿತ್ಯ ಪಾರ್ಕ್ ವೀಕ್ಷಣೆಗಾಗಿ ಬರುತ್ತಿದ್ದಾರೆ. ಇಂತಹ ಸ್ಥಳವನ್ನ ಪರಿಸರ ಸ್ನೇಹಿಯಾಗಿ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಲಾಲ್‍ಬಾಗ್‍ನಂತೆ ಕಬ್ಬನ್ ಪಾರ್ಕ್‍ನಲ್ಲೂ ಪಕ್ಷಿಗಳ ಕಲರವ ಹೆಚ್ಚಾಗಬೇಕೆಂದರೆ ಸ್ವಚ್ಚ ವಾತಾವರಣ ನಿರ್ಮಿಸಲೇಬೇಕಿದೆ ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ. ಈ ಎಲ್ಲ ವಿಚಾರವನ್ನ ಚರ್ಚಿಸಿದ ಸಚಿವ ನಾರಾಯಣ ಗೌಡ ಅವರು ಪಾರ್ಕ್ ಅಭಿವೃದ್ಧಿಗೆ ಇದು ಪೂರಕ ಎಂಬುದನ್ನು ಮನಗಂಡು, ಸುಮಾರು 197 ಎಕರೆ ಪ್ರದೇಶದಲ್ಲಿರುವ ಕಬ್ಬನ್ ಪಾರ್ಕ್ ವಾಹನ ಸಂಚಾರ ಮುಕ್ತವಾಗುವುದು ಅನಿವಾರ್ಯ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ. ಹೀಗಾಗಿ ಸಚಿವರು ಈ ಎಲ್ಲ ಅಂಶಗಳನ್ನ ಸೇರಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು, ಸಿಎಂ ಶೀಘ್ರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ: ಹಿಂದಿ ಸೇರಿ ತೃತೀಯ ಭಾಷೆಗಳು ಲೆಕ್ಕಕ್ಕಿಲ್ಲ!

ಇಸ್ರೇಲ್ ಹಿಟ್ ಲಿಸ್ಟ್ ನಿಂದ ಇರಾನ್‌ನ ಉನ್ನತಾಧಿಕಾರಿ ಅರಘ್ಚಿ, ಗಾಲಿಬಾಫ್ ಪಾರಾಗಿದ್ದು ನಮ್ಮಿಂದಲೇ: Pakistan

ದೇಗುಲದ ಗೆಸ್ಟ್ ಹೌಸ್ ನಲ್ಲೇ ಮಹಿಳೆ ಜೊತೆ TDP ನಾಯಕರ ಅಶ್ಲೀಲ 'ನಾಗಿನ್ ಡ್ಯಾನ್ಸ್', Video Viral

"ನಾಳೆ ರೋಮಾಂಚಕಾರಿ ಘೋಷಣೆಯೊಂದಿದೆ"; ಇರಾನ್ ನ್ನು ಆಕ್ರಮಿಸುವ ಸುದ್ದಿಗಳ ನಡುವೆ ಶ್ವೇತ ಭವನದ ಮಾರ್ಮಿಕ ಹೇಳಿಕೆ

KBC ಯಲ್ಲಿ 50 ಲಕ್ಷ ಗೆದ್ದ ಮಧ್ಯಪ್ರದೇಶದ ಅಧಿಕಾರಿ 2.5 ಕೋಟಿ ಪರಿಹಾರ ಹಗರಣದಲ್ಲಿ ಬಂಧನ

SCROLL FOR NEXT