ಜೆ.ಸಿ ಮಾಧುಸ್ವಾಮಿ 
ರಾಜ್ಯ

ಕಾನೂನು ಪದವಿಗಳ ಪರೀಕ್ಷೆ ಮುಂದೂಡಿಕೆ: ಜೆಸಿ ಮಾಧುಸ್ವಾಮಿ

ಕಾನೂನು ಪದವಿಯ ಪ್ರಥಮ ವರ್ಷದಿಂದ ನಾಲ್ಕನೇ ವರ್ಷದ ಪದವಿವರೆಗಿನ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಕಾನೂನು‌ ಪದವಿ ಅಂತಿಮ ವರ್ಷದ ಪರೀಕ್ಷೆಗಳು ಅಕ್ಟೋಬರ್ ನಲ್ಲಿ ಅನ್ ಲೈನ್ ಮೂಲಕ ನಡೆಸಲು‌ ತೀರ್ಮಾನಿಸಲಾಗಿದೆ ...

ಬೆಂಗಳೂರು: ಕಾನೂನು ಪದವಿಯ ಪ್ರಥಮ ವರ್ಷದಿಂದ ನಾಲ್ಕನೇ ವರ್ಷದ ಪದವಿವರೆಗಿನ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಕಾನೂನು‌ ಪದವಿ ಅಂತಿಮ ವರ್ಷದ ಪರೀಕ್ಷೆಗಳು ಅಕ್ಟೋಬರ್ ನಲ್ಲಿ ಅನ್ ಲೈನ್ ಮೂಲಕ ನಡೆಸಲು‌ ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಬುಧವಾರ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಧುಸ್ವಾಮಿ, ಮುಂದೂಡುವ ಪರೀಕ್ಷೆಗಳಲ್ಲಿ ಪಾಸ್ ಆದರೆ ಮಾತ್ರ ಅದರ ಮುಂದಿನ ಸೆಮಿಸ್ಟರ್ ಗೆ ಹೋಗಲು ಅವಕಾಶ ನೀಡಲಾಗುವುದು ಎಂದರು.

ಈಗಾಗಲೇ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದ್ದರು. ಅದೇ ರೀತಿ ಶಿಕ್ಷಣ ತಜ್ಞರು, ರಾಜಕೀಯ ನಾಯಕರು ಕೂಡ ಇದೇ ಬೇಡಿಕೆ ಇಟ್ಟಿದ್ದರು. ಲಾಕ್ ಡೌನ್ ಮಾರ್ಚ್ ನಲ್ಲಿ ಆರಂಭವಾದ ಕಾರಣ ಮೂರು ತಿಂಗಳು ತರಗತಿಗಳು ನಡೆದಿಲ್ಲ. ಹಾಗಾಗಿ ಪರೀಕ್ಷೆಗಳನ್ನು ಮುಂದೂಡುತ್ತಿದ್ದೇವೆ ಎಂದರು

ಸೆಪ್ಟೆಂಬರ್ ನಲ್ಲಿ  ತರಗತಿಗಳು ಆರಂಭವಾಗುತ್ತವೆ. ಅನ್ ಲೈನ್ ನಲ್ಲಿಯೂ ತರಗತಿಗಳು ಶುರುವಾಗುತ್ತವೆ. ಈಗಿರುವ ಸೆಮಿಸ್ಟರ್ ನಿಂದ ಮುಂದಿನ ಸೆಮಿಸ್ಟರ್ ಗೆ ತೇರ್ಗಡೆ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ