ಬಂಧಿತ ಆರೋಪಿ ಶಂಕರಪ್ಪ 
ರಾಜ್ಯ

ಬೆಂಗಳೂರು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳ್ಳತನ: ಆರೋಪಿ ಬಂಧನ

ಜೂಜಾಡುವ ಚಟಕ್ಕೆ ಬಿದ್ದಿದ್ದ ವ್ಯಕ್ತಿಯೊಬ್ಬ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣಗಳ ಕಳವು ಮಾಡಿ ಇದೀಗ ಗಿರಿನಗರದ ಪೊಲೀಸರ ಅತಿಥಿಯಾಗಿದ್ದಾನೆ.

ಬೆಂಗಳೂರು: ಜೂಜಾಡುವ ಚಟಕ್ಕೆ ಬಿದ್ದಿದ್ದ ವ್ಯಕ್ತಿಯೊಬ್ಬ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣಗಳ ಕಳವು ಮಾಡಿ ಇದೀಗ ಗಿರಿನಗರದ ಪೊಲೀಸರ ಅತಿಥಿಯಾಗಿದ್ದಾನೆ.

ಶಂಕರಪ್ಪ ಬಂಧಿತ ಆರೋಪಿ. ಆರೋಪಿಯು ಕೆಲ ವರ್ಷಗಳಿಂದ ಗಿರಿನಗರದ ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ಮನೆಯಲ್ಲಿ ಯಾರು ಇಲ್ಲದ ವೇಳೆ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣ ಎಗರಿಸಿದ್ದ.

ನಂತರ ಶಂಕರಪ್ಪ ಕಳವು ಮಾಡಿದ ಚಿನ್ನಾಭರಣವನ್ನು ಹೊಸದುರ್ಗದಲ್ಲಿ ಅಡವಿಟ್ಟಿದ್ದ. ಮನೆಯಲ್ಲಿದ್ದ ಚಿನ್ನಾಭರಣ ಕಾಣೆಯಾದಾಗ ಮನೆಯ ಯಜಮಾನ, ಗಿರಿನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು

ಆದರೆ ಆರೋಪಿ ಶಂಕರಪ್ಪ ತಾನು ಅಡವಿಟ್ಟ ಚಿನ್ನದಿಂದ ಬಂದ ಹಣವನ್ನು ಜೂಜಿನಲ್ಲಿ ಕಳೆದಿದ್ದ. ಇದೀಗ ಆರೋಪಿಯನ್ನು ಬಂಧಿಸಿರುವ ಪೋಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ತಡೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹತೆ ರದ್ದು!

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ