ಸಂಗ್ರಹ ಚಿತ್ರ 
ರಾಜ್ಯ

ಸಿಸಿಬಿ ಪೊಲೀಸರ ಇತಿಹಾಸದಲ್ಲಿಯೇ ದಾಖಲೆ: 1 ಕೋಟಿ ರೂ. ಮೌಲ್ಯದ 2 ಕ್ವಿಂಟಾಲ್ ಗಾಂಜಾ ವಶ; 3 ಬಂಧನ

ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಸುಮಾರು 1 ಕೋಟಿ ಮೌಲ್ಯದ ‌ 2 ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ. 

ಬೆಂಗಳೂರು: ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಸುಮಾರು 1 ಕೋಟಿ ಮೌಲ್ಯದ ‌2 ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ. 

ಇದು ಸಿಸಿಬಿ ಪೊಲೀಸರ ಇತಿಹಾಸದಲ್ಲಿಯೇ ದಾಖಲೆ ಪ್ರಮಾಣದ ಗಾಂಜಾ ವಶಪಡಿಸಿಕೊಂಡ ಪ್ರಕರಣವಾಗಿದೆ.

ಮೈಸೂರು ಮಹಾನಗರ ಪಾಲಿಕೆ  ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಕೈಸರ್ ಪಾಷಾ (41), ಮೈಸೂರಿನ ಎನ್ ಆರ್ ಪುರದ ಸಮೀರ್(37) ಹಾಗೂ ಚಿಕ್ಕ ಬಳ್ಳಾಪುರದ ಉದಗೂರಿನ ಇಸ್ಮಾಯಿಲ್ ಷರೀಫ್(38) ಬಂಧಿತ ಆರೋಪಿಗಳು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಬಂಧಿತ ಆರೋಪಿ ಗಳಿಂದ 1ಕೋಟಿ ಮೌಲ್ಯದ 204 ಕೆಜಿ ಗಾಂಜಾ 1ಲಾರಿ, 1 ಕಾರು, 3 ಮೊಬೈಲ್ ಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!