ರಾಜ್ಯ

ರಾಮನಗರ: ವಿವಿಧ ನೀರಾವರಿ, ಕುಡಿಯುವ ನೀರು ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್

Nagaraja AB

ರಾಮನಗರ: ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಪ್ರಗತಿ ಪರಿಶೀಲನೆ ಕುರಿತು ಕಾವೇರಿ ನೀರಾವರಿ ನಿಗಮ ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ. ಎನ್. ಅಶ್ವತ್ ನಾರಾಯಣ ಇಂದು  ಸಭೆ ನಡೆಸಿದರು.

ಶ್ರೀರಂಗ ಏತ ನೀರಾವರಿ, ಸತ್ತೇಗಾಲ ಕುಡಿಯುವ ನೀರು ಯೋಜನೆ ಸೇರಿದಂತೆ ವಿವಿಧ ನೀರಾವರಿ, ಕುಡಿಯುವ ನೀರು ಯೋಜನೆಗಳನ್ನು 3 ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಒಟ್ಟು 540 ಕೋಟಿ ರೂಪಾಯಿ ವೆಚ್ಚದ ಸತ್ತೇಗಾಲ ಕುಡಿಯುವ ನೀರು ಯೋಜನೆ ಪ್ರಗತಿಯಲ್ಲಿದ್ದು, ಇದರಿಂದ ಮೊಗೇನಹಳ್ಳಿ ಕೆರೆ ಮತ್ತು ಕಣ್ವ ಜಲಾಶಯಕ್ಕೆ ನೀರನ್ನು ತುಂಬಿಸಲಾಗುತ್ತದೆ.ಪುನಃ ಅಲ್ಲಿಂದ ಮಂಚನಬೆಲೆ ಜಲಾಶಯ ಮತ್ತು ವೈ.ಜಿ.ಗುಡ್ಡ ಕೆರೆಗೆ ತಂದು ಅದನ್ನು 4 ತಾಲ್ಲೂಕುಗಳಿಗೂ ಕುಡಿಯುವ ನೀರನ್ನು ಒದಗಿಸಲಾಗುವುದು ಎಂದರು.

ಗರಕಹಳ್ಳಿ ಏತ ಯೋಜನೆ, ಸಾತನೂರು ಕೆರೆ ಹಾಗೂ ನಾರಾಯಪುರ ಕೆರೆ ತುಂಬಿಸುವ ಯೋಜನೆ, ಕೆಂಗೇರಿ ದೊಡ್ಡಬೆಲೆ ಏತ ಯೋಜನೆ,ಬೈರಮಂಗಲ ತಿರುವು ನಾಲಾ ಯೋಜನೆ, ಕಣ್ವ ನಾಲೆಗಳ ಆಧುನೀಕರಣ ಯೋಜನೆ, ಅರೆಕೊಪ್ಪ ಹಾಗೂ ಹೆಗ್ಗನೂರು ಸೂಕ್ಷ್ಮ ನೀರಾವರಿ, ದೊಡ್ಡಾಲಹಳ್ಳಿ ಹನಿ ನೀರಾವರಿ ಯೋಜನೆಗಳ ಪ್ರಗತಿ ಬಗ್ಗೆಯೂ ಅಧಿಕಾರಿಗಳೊಂದಿಗೆ ಡಾ. ಅಶ್ವತ್ನಾರಾಯಣ ಚರ್ಚಿಸಿದರು.

SCROLL FOR NEXT