ನಕ್ಷತ್ರ ಆಮೆ ಮಾರಾಟಕ್ಕೆ ಯತ್ನಿಸಿದ ತಂಡ 
ರಾಜ್ಯ

ನಕ್ಷತ್ರ ಆಮೆ ಮಾರಾಟ ಯತ್ನ: ಐವರ ಬಂಧನ, ಓರ್ವ ಪರಾರಿ

ನಕ್ಷತ್ರ ಆಮೆ ಮಾರಾಟಕ್ಕೆ ಯತ್ನಿಸಿದ ಜಾಲವೊಂದನ್ನು ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ. 

ಚಾಮರಾಜನಗರ: ನಕ್ಷತ್ರ ಆಮೆ ಮಾರಾಟಕ್ಕೆ ಯತ್ನಿಸಿದ ಜಾಲವೊಂದನ್ನು ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಬೆಂಗಳೂರಿನ ಮಾಗಡಿಯ ರಾಜು, ಕೊಡಗಿನ ಪ್ರವೀಣ್, ವಿಶ್ವನಾಥ್, ಶಿವಮೊಗ್ಗದ ಪ್ರಸನ್ನ ಕುಮಾರ್, ಲಚ್ಚಿ  ಕುರಿಯನ್ ಬಂಧಿತ ಆರೋಪಿಗಳು. ಮೂಢ ನಂಬಿಕೆ ಸೃಷ್ಟಿಸಿ ಮನೆಯಲ್ಲಿ ನಕ್ಷತ್ರ ಆಮೆ ಇದ್ದರೆ ಶ್ರೀಮಂತಿಕೆ ಬರಲಿದೆ ಎಂದು ಜನರನ್ನು ನಂಬಿಸಿ ಲಕ್ಷಾಂತರ ರೂ.ಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.

ಈ ಜಾಲದ ಕುರಿತು ಮಾಹಿತಿ ಪಡೆದ ಪೊಲೀಸರು ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ  ಐವರನ್ನು ನಕ್ಷತ್ರ ಆಮೆ ಸಮೇತ ಸೆರೆಹಿಡಿದಿದ್ದಾರೆ. ಜೊತೆಗೆ ಪರಾರಿಯಾಗಿರುವ ಶಿವಮೊಗ್ಗದ ಥಾಮಸ್ ಎಂಬಾತನ ಪತ್ತೆಗೆ ಬಲೆ ಬೀಸಿದ್ದು ಬಂಧಿತರನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. 

ವರದಿ ಗುಳಿಪುರ ನಂದೀಶ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!