ರಾಜ್ಯ

ನಾಲ್ಕೂ ಕಂದಾಯ ವಿಭಾಗದಲ್ಲಿ ರೈತರಿಗೆ ಸಾಲ ಮೇಳ- ಸಚಿವ ಎಸ್. ಟಿ. ಸೋಮಶೇಖರ್

Nagaraja AB

ಹುಣಸೂರು: ಕಲಬುರಗಿ,ಬೆಳಗಾವಿ, ಬೆಂಗಳೂರು ಹಾಗೂ ಮೈಸೂರಿನ ನಾಲ್ಕು ವಿಭಾಗಗಳ ಲ್ಲಿ ಸಾಲ ಮೇಳ ಮಾಡಿ ರೈತರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲಾಗುವುದು ಎಂದು ಸಹಕಾರ ಮತ್ತು ಮೈ ಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಸಹಕಾರ ಇಲಾಖೆ ಮೂಲಕ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮವನ್ನು ಉದ್ಘಾ ಟಿಸಿ ಮಾತನಾಡಿದ ಅವರು,ಕಳೆದ ವರ್ಷ 13,500 ಕೋಟಿ ರೂ.,ಈ ಸಾಲಿನಲ್ಲಿ 14,500 ಕೋಟಿ ರೂ ಹಾಗೂ ಮುಂದಿನ ವರ್ಷ 20 ಸಾವಿರ ಕೋಟಿ ರೂಪಾಯಿ ಸಾಲ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಹೊಸಬರನ್ನು ಗುರುತಿಸಿ ಸಾಲ  ನೀಡಬೇಕೆಂಬ ಗುರಿ ನೀಡಲಾಗಿದೆ. ಅಲ್ಲದೆ, 21 ಡಿಸಿಸಿ ಬ್ಯಾಂಕ್ ಹಾಗೂ ಅಪೆಕ್ಸ್ ಬ್ಯಾಂಕ್ಸ್ ವತಿಯಿಂದ 14500 ಕೋಟಿ ರೂಪಾಯಿ ಸಾಲ ನೀಡಲು ಆಗಸ್ಟ್ 31 ರ ಗುರಿ ನೀಡಲಾಗಿದೆ ಎಂದರು.

119 ಸಕ್ಕರೆ ಕಾರ್ಖಾನೆಗಳು 5529 ಕೋಟಿ ರೂ.ಸಾಲವನ್ನು ಪಡೆದಿವೆ. ಆದರೆ, ವಸೂಲಾತಿ ಏನೂ ಆಗಿಲ್ಲ.ಅದೇ ರೈತರಿಗೆ ಸಾಲದ ಹಣ ಕೊಟ್ಟರೆ ಅವರಿಂದ ಶೇಕಡಾ 100ರಷ್ಟು ಹಣ ಮರುಪಾವತಿಯಾಗುತ್ತದೆ.ಹೀಗಾಗಿ ಹೈನು ಗಾರಿಕೆ,ಮೀನುಗಾರಿಕೆ ಸೇರಿದಂತೆ ಇತರ ಕ್ಷೇತ್ರಗಳಿಗಾಗಿ ಸಾಲ ಕೊಟ್ಟರೆ ಸಾಲ ಮರುಪಾವತಿಯಾಗುವುದಲ್ಲದೆ ಬ್ಯಾಂಕುಗಳು ಅಭಿವೃದ್ಧಿಯಾಗಲಿದೆ ಎಂದು ಸಚಿವರು ಹೇಳಿದರು.

ಈಗಾಗಲೇ 42 ಸಾವಿರ ಆಶಾ ಕಾರ್ಯಕರ್ತೆಯರಲ್ಲಿ ಬಹುತೇಕರಿಗೆ ಪ್ರೋತ್ಸಾಹಧನ ವಿತರಣೆ ಮಾಡಲಾಗಿದೆ. ಕೆಲವೇ ಕೆಲವು ಆಶಾ ಕಾರ್ಯಕರ್ತೆಯರಿಗೆ ಲಭಿಸಿಲ್ಲ ಎಂಬ ಮಾಹಿತಿ ಕೇಳಿ ಬರುತ್ತಿದೆ.ಹೀಗಾಗಿ ಯಾರಿಗೆ ತಲುಪಿಲ್ಲವೋ ಅವರಿಗೆ ತಲುಪಿಸುವ ಕಾರ್ಯವನ್ನು ಮಾಡಲಾಗುತ್ತದೆ.ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆಯ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳು ನನಗೆ ಕೊಟ್ಟಿದ್ದು, ಅದಕ್ಕೆ ಯಾವುದೇ ದಕ್ಕೆಯಾಗದಂತೆ ಕಾರ್ಯನಿರ್ವಹಿಸಿದ್ದೇವೆ.ಇನ್ನು ಸ್ತ್ರೀ ಶಕ್ತಿ ಗುಂಪುಗಳಂತೆ ಆಶಾ ಕಾರ್ಯಕರ್ತೆಯರಿಗೂ ಸಾಲ ಯೋಜನೆ ಸಿಗುವಂತಾಗಬೇಕು ಎಂಬ ನಿಟ್ಟಿನಲ್ಲಿ ಅವರಿಗೆ ಸಹಕಾರಿ ಸಂಘದ ಮೂಲಕ ಸಾಲ ನೀಡಲು ಯೋಜನೆ ರೂಪಿಸಲಾ ಗುತ್ತಿದೆ. ಶೀಘ್ರದಲ್ಲಿ ಈ ಬಗ್ಗೆ ತಿಳಿಸಲಾಗುವುದು ಎಂದು ಸಚಿವರು ತಿಳಿಸಿದರು.

SCROLL FOR NEXT