ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಮುನಿರತ್ನಗೆ ಕೊರೋನಾ ಪಾಸಿಟಿವ್

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ನಿರ್ಮಾಪಕ ಮುನಿರತ್ನಗೂ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ.

ಜನಾರ್ದನ ರೆಡ್ಡಿ-ಮುನಿರತ್ನ
Vishwanath S
Updated On : 29 Aug 2020, 10:34 pm

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ನಿರ್ಮಾಪಕ ಮುನಿರತ್ನಗೂ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. 

ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನಾರ್ದನ ರೆಡ್ಡಿ ಅವರು ಆಗಸ್ಟ್ 30ರಂದು ಬಳ್ಳಾರಿಗೆ ತೆರಳಬೇಕಾಗಿತ್ತು. ಇದಕ್ಕೂ ಮುನ್ನ ಇಂದು ಸಂಜೆ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಕುರಿತಂತೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು,  ಇಂದು ಸಂಜೆ ನನಗೆ ಕೊರೋನಾ ಸೊಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ  ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವೆ. ಆ ಕಾರಣದಿಂದ ನಾನು ನಾಳೆ ಆಗಸ್ಟ್ 30 ರಂದು ಬಳ್ಳಾರಿಗೆ ಭೇಟಿ ನೀಡಿ ನನ್ನ ಪ್ರಾಣ ಸ್ನೇಹಿತ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿಯವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆಸ್ಪತ್ರೆಯಲ್ಲಿ ಉತ್ತಮ ವೈದ್ಯರ ತಂಡ ನನಗೆ ಚಿಕಿತ್ಸೆ ನೀಡುತ್ತಿದೆ. ನನಗೆ ಯಾವುದೇ ರೋಗದ ಲಕ್ಷಣಗಳು ಇಲ್ಲದಿದ್ದರೂ ಕೊರೋನಾ ಪಾಸಿಟಿವ್ ಬಂದಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ ಮನೆಗೆ ಮರಳಲಿದ್ದೇನೆ ಎಂದು ತಿಳಿಸಿದ್ದಾರೆ.

Advertisement

Advertisement

ಮುನಿರತ್ನ ಅವರು ಫೇಸ್ ಬುಕ್ ನಲ್ಲಿ ಕೊರೋನಾ ಪಾಸಿಟಿವ್ ಬಂದಿರುವುದನ್ನು ಸ್ಪಷ್ಟಪಡಿಸಿದ್ದಾರೆ. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ನನ್ನ ಎಲ್ಲಾ ಮತದಾರ ದೇವರುಗಳಿಗೆ ವಂದನೆಗಳು. 57 ವರ್ಷ ವಯಸ್ಸಿನವನಾದ ನಾನು ಇಂದು ಕೊವೀಡ್ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ. ಕ್ಷೇಮವಾಗಿ ಬಂದರೆ ನಿಮ್ಮ ಸೇವೆ. ಇಲ್ಲದಿದ್ದರೆ ಕ್ಷಮಿಸಿಬಿಡಿ.

https://www.facebook.com/munirathnamlaofficial/posts/3406741626047083

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments