ಕೋಟ ಶ್ರೀನಿವಾಸ ಪೂಜಾರಿ 
ರಾಜ್ಯ

ಕಿಸಾನ್ ಕಾರ್ಡ್ ಹೊಂದಿದ ಮೀನುಗಾರರಿಗೆ ಸಾಲ ಸೌಲಭ್ಯ- ಸಚಿವ ಕೋಟ ಶ್ರೀನಿವಾಸ ಪೂಜಾರಿ

ರಾಜ್ಯ ಸರ್ಕಾರ ಆತ್ಮ ನಿರ್ಮಲ ಯೋಜನೆ ಅಡಿಯಲ್ಲಿ ಮೀನುಗಾರಿಕೆ ಇಲಾಖೆಯ ಮೂಲಕ ಸ್ವಯಂ ಉದ್ಯೋಗದಲ್ಲಿ ತೊಡಗಿಕೊಳ್ಳಲು ಯೋಜನೆಯನ್ನು ರೂಪಿಸಿದೆ. ಈ ಯೋಜನೆಯ ಮೂಲಕ ತರಬೇತಿ ಪಡೆದುಕೊಂಡು ಪಂಜರ ಮೀನುಕೃಷಿಯಲ್ಲಿ ಯಶಸ್ಸು ಕಾಣಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಂಗಳೂರು: ರಾಜ್ಯ ಸರ್ಕಾರ ಆತ್ಮ ನಿರ್ಮಲ ಯೋಜನೆ ಅಡಿಯಲ್ಲಿ ಮೀನುಗಾರಿಕೆ ಇಲಾಖೆಯ ಮೂಲಕ ಸ್ವಯಂ ಉದ್ಯೋಗದಲ್ಲಿ ತೊಡಗಿಕೊಳ್ಳಲು ಯೋಜನೆಯನ್ನು ರೂಪಿಸಿದೆ. ಈ ಯೋಜನೆಯ ಮೂಲಕ ತರಬೇತಿ ಪಡೆದುಕೊಂಡು ಪಂಜರ ಮೀನುಕೃಷಿಯಲ್ಲಿ ಯಶಸ್ಸು ಕಾಣಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ಪಂಜರ ಮೀನುಕೃಷಿ ಕಾರ್ಯಾಗಾರವನ್ನು ಉದ್ಘಾಟಿಸಿ ಇಲಾಖಾ ಮಾಹಿತಿಗಳ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದ ಸಚಿವರು, ಪಂಜರ ಮೀನು ಕೃಷಿಯು ಈ ಹಿಂದೆ ಗುಜರಾತ್, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಒರಿಸ್ಸಾ ರಾಜ್ಯದಲ್ಲಿ ಮಾತ್ರ ಕಾಣಲು ಸಾಧ್ಯವಾಗಿತ್ತು. ಕರ್ನಾಟಕದಲ್ಲಿ  ಈ ಯೋಜನೆ ಜಾರಿಗೊಳಿಸುವುದರ ಮೂಲಕ ಮೀನುಗಾರಿಕೆಯಲ್ಲಿ ಮಹತ್ವದ ಬದಲಾವಣೆಯನ್ನು ಪಡೆಯಬಹುದು ಎಂದರು.

ಕೇಂದ್ರ ಸರ್ಕಾರವು ಮೀನುಗಾರರನ್ನು ಪ್ರೋತ್ಸಾಹಿಸಲು ಡಿಸಿಸಿ ಬ್ಯಾಂಕ್ ವತಿಯಿಂದ ಕಿಸಾನ್ ಕಾರ್ಡ್ ಹೊಂದಿದವರಿಗೆ  ರೂ. 2 ರಿಂದ 3 ಲಕ್ಷ ಸಾಲವನ್ನು ನೀಡುತ್ತಿದೆ. ಈ ಯೋಜನೆಯ ಮೂಲಕ 10 ಸಾವಿರ ಜನರಿಗೆ ಸ್ವಯಂ ಉದ್ಯೋಗ ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ್ದು, ಮೀನುಗಾರಿಕೆ ಇಲಾಖೆಯವರು  ಒಟ್ಟುಗೂಡಿ ಒಂದು ತಂಡವಾಗಿ ಶ್ರಮಿಸಿದರೆ ಈ ಯೋಜನೆಯನ್ನು ತಳಮಟ್ಟದ ಜನರಿಗೆ ತಲುಪುವಂತೆ ಮಾಡಿ ಯೋಜನೆ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!